Versions
KNV ಸಮಸ್ತ ಇಸ್ರಾಯೇಲ್ಯರಿಗೆ ಬೋಧಿಸತಕ್ಕ ವರೂ ಕರ್ತನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವಿಲ್ಲದ ಹಾಗೆ ನೀವು ಅದನ್ನು ಇಸ್ರಾ ಯೇಲಿನ ಅರಸನಾಗಿರುವ ದಾವೀದನ ಮಗನಾದ ಸೊಲೊಮೋನನು ಕಟ್ಟಿಸಿದ ಮನೆಯಲ್ಲಿ ಇರಿಸಿ ನಿಮ್ಮ ದೇವರಾದ ಕರ್ತನನ್ನೂ ಆತನ ಜನವಾದ ಇಸ್ರಾಯೇಲ್ಯರನ್ನೂ ಸೇವಿಸಿರಿ.
ERVKN ಎಲ್ಲಾ ಇಸ್ರೇಲರಿಗೆ ಉಪದೇಶಿಸತಕ್ಕವರೂ ಯೆಹೋವನಿಗೆ ಪ್ರತಿಷ್ಠಿತರೂ ಆದ ಲೇವಿಯರಿಗೆ ಯೋಷೀಯನು, “ದೇವರ ಒಡಂಬಡಿಕೆಯ ಪೆಟ್ಟಿಗೆಯನ್ನು ಸೊಲೊಮೋನನು ಕಟ್ಟಿದ ದೇವಾಲಯದೊಳಗೆ ಇಡಿರಿ. ಸೊಲೊಮೋನನು ಇಸ್ರೇಲಿನ ರಾಜನಾದ ದಾವೀದನ ಮಗ. ಆ ಪೆಟ್ಟಿಗೆಯನ್ನು ನಿಮ್ಮ ಹೆಗಲಿನ ಮೇಲೆ ಹೊತ್ತುಕೊಂಡು ಸ್ಥಳದಿಂದ ಸ್ಥಳಕ್ಕೆ ಹೋಗಬೇಡಿ; ನಿಮ್ಮ ದೇವರಾದ ಯೆಹೋವನ ಸೇವೆಮಾಡಿರಿ; ದೇವಜನರಾದ ಇಸ್ರೇಲರ ಸೇವೆಮಾಡಿರಿ.