Bible Versions
Bible Books

2 Chronicles 24:20 (WEB) World English Bible

Versions

KNV   ಆಗ ದೇವರ ಆತ್ಮನು ಯಾಜಕನಾಗಿ ರುವ ಯೆಹೋಯಾದನ ಮಗನಾದ ಜೆಕರ್ಯನ ಮೇಲೆ ಬಂದನು. ಅವನು ಜನರೊಳಗೆ ಎತ್ತರವಾದ ಸ್ಥಳದಲ್ಲಿ ನಿಂತು ಅವರಿಗೆ--ನೀವು ವೃದ್ಧಿಹೊಂದ ಕೂಡದ ಹಾಗೆ ಕರ್ತನ ಆಜ್ಞೆಗಳನ್ನು ವಿಾರುವದೇನು? ನೀವು ಕರ್ತನನ್ನು ಬಿಟ್ಟದ್ದರಿಂದ ಆತನು ನಿಮ್ಮನ್ನು ಬಿಟ್ಟಿದ್ದಾನೆಂದು ಕರ್ತನು ಹೇಳುತ್ತಾನೆ ಅಂದನು.
ERVKN   ಜೆಕರ್ಯನ ಮೇಲೆ ದೇವರಾತ್ಮನು ಬಂದನು. ಅವನು ಯಾಜಕನಾದ ಯೆಹೋಯಾದನ ಮಗ. ಜೆಕರ್ಯನು ಜನರ ಮುಂದೆ ನಿಂತು, “ಯೆಹೋವನು ಇಂತೆನ್ನುತ್ತಾನೆ: ‘ಯೆಹೋವನ ಆಜ್ಞೆಗಳಿಗೆ ವಿಧೇಯರಾಗಲು ನೀವು ಏಕೆ ನಿರಾಕರಿಸುತ್ತೀರಿ? ಏತಕ್ಕೆ? ನೀವು ಉದ್ಧಾರವಾಗುವುದಿಲ್ಲ. ನೀವು ಯೆಹೋವನನ್ನು ತೊರೆದದ್ದರಿಂದ ಆತನು ನಿಮ್ಮನ್ನೂ ತೊರೆದು ಬಿಟ್ಟಿರುತ್ತಾನೆ” ಎಂದು ಹೇಳಿದನು.
IRVKN   ಆಗ ಯಾಜಕನಾದ ಯೆಹೋಯಾದನ ಮಗ ಜೆಕರ್ಯನು ದೇವರ ಆತ್ಮನಿಂದ ತುಂಬಿದವನಾಗಿ ಆವೇಶ ಉಳ್ಳವನಾದನು. ಆಗ ಅವನು ಜನರ ಎದುರಿನಲ್ಲಿ ಉನ್ನತ ಸ್ಥಾನದಲ್ಲಿ ನಿಂತುಕೊಂಡು ಅವರಿಗೆ, “ದೇವರ ಮಾತನ್ನು ಕೇಳಿರಿ; ನೀವು ಯೆಹೋವನ ಆಜ್ಞೆಗಳನ್ನು ಮೀರಿ, ನಿಮ್ಮನ್ನೆ ಏಕೆ ನಾಶಮಾಡಿಕೊಳ್ಳುತ್ತಿದ್ದೀರಿ? ನೀವು ಯೆಹೋವನನ್ನು ಕಡೆಗಣಿಸಿರುವುದರಿಂದ; ಆತನೂ ನಿಮ್ಮನ್ನು ಕಡೆಗಣಿಸಿದ್ದಾನೆ” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us