Versions
KNV ಇಸ್ರಾಯೇಲನ್ನು ಆಳುವ ಮನುಷ್ಯನು ನಿನಗೆ ಕೊರತೆ ಯಾಗುವದಿಲ್ಲವೆಂದು ನಿನ್ನ ತಂದೆಯಾದ ದಾವೀದನ ಸಂಗಡ ನಾನು ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
ERVKN ನಾನು ನಿನ್ನನ್ನು ಬಲಿಷ್ಠನಾದ ಅರಸನನ್ನಾಗಿ ಮಾಡುವೆನು. ನಿನ್ನ ರಾಜ್ಯವು ಮಹಾರಾಜ್ಯವಾಗುವದು. ನಿನ್ನ ತಂದೆಯಾದ ದಾವೀದನಿಗೆ, ‘ದಾವೀದನೇ, ನಿನ್ನ ಕುಟುಂಬದವರಲ್ಲಿ ಒಬ್ಬನು ಯಾವಾಗಲೂ ಇಸ್ರೇಲಿನ ರಾಜನಾಗಿರುವನು’ ಎಂದು ನಾನು ವಾಗ್ದಾನ ಮಾಡಿದ್ದೇನೆ.
IRVKN ನಿನ್ನ ರಾಜ್ಯಸಿಂಹಾಸನವನ್ನು ಸ್ಥಿರಪಡಿಸುವೆನು; ಅಲ್ಲದೆ ಇಸ್ರಾಯೇಲರಲ್ಲಿ ನಿನ್ನ ಸಂತಾನದವರು ತಪ್ಪದೆ ಸದಾಕಾಲ ರಾಜ್ಯಾಭಾರ ನಡಿಸುವರು ಎಂಬುದಾಗಿ ನಿನ್ನ ತಂದೆಯಾದ ದಾವೀದನಿಗೆ ನಾನು ಮಾಡಿದ ವಾಗ್ದಾನವನ್ನು ನೆರವೇರಿಸುವೆನು.