Versions
KNV ಯಾಕೆ ಹೀಗಾಯಿತಂದರೆ, ಇಸ್ರಾಯೇಲಿನ ಮಕ್ಕಳು, ಐಗುಪ್ತದ ಅರಸನಾದ ಫರೋಹನ ಕೈಯಿಂದ ತಪ್ಪಿಸಿ ಐಗುಪ್ತದೇಶದೊಳಗಿಂದ ಬರ ಮಾಡಿದ ತಮ್ಮ ದೇವರಾದ ಕರ್ತನಿಗೆ ವಿರೋಧ ವಾಗಿ ಪಾಪಮಾಡಿ ಇತರ ದೇವರುಗಳಿಗೆ ಭಯಪಟ್ಟರು.
ERVKN ಇಸ್ರೇಲರು ತಮ್ಮ ದೇವರಾದ ಯೆಹೋವನ ವಿರುದ್ಧ ಪಾಪಗಳನ್ನು ಮಾಡಿದ್ದರಿಂದ ಇವೆಲ್ಲವೂ ಸಂಭವಿಸಿದವು. ಈಜಿಪ್ಟಿನ ರಾಜನಾದ ಫರೋಹನ ಆಳ್ವಿಕೆಯಿಂದ ಇಸ್ರೇಲರನ್ನು ತಪ್ಪಿಸಿ ಯೆಹೋವನು ಅವರನ್ನು ಈಜಿಪ್ಟ್ ದೇಶದಿಂದ ಹೊರತಂದಿದ್ದನು. ಆದರೆ ಇಸ್ರೇಲರು ಬೇರೆ ದೇವರುಗಳನ್ನು ಪೂಜಿಸಲು ಆರಂಭಿಸಿ
IRVKN {ಇಸ್ರಾಯೇಲರ ಸೋಲಿಗೆ ಕಾರಣಗಳು} PS ಇಸ್ರಾಯೇಲರ ಈ ದುರ್ಗತಿಗೆ, ಅವರ ದುರ್ನಡತೆಯೇ ಕಾರಣ. ಹೇಗೆಂದರೆ ಅವರು ತಮ್ಮನ್ನು ಐಗುಪ್ತದ ಅರಸನಾದ ಫರೋಹನ ಕೈಯಿಂದ ಬಿಡಿಸಿ, ಅವನ ರಾಜ್ಯದಿಂದ ಹೊರತಂದ ದೇವರಾದ ಯೆಹೋವನಿಗೆ ಭಯಪಡದೆ, ಪಾಪಮಾಡಿ ಅನ್ಯದೇವತೆಗಳನ್ನು ಸೇವಿಸಿದರು.