Versions
KNV ಅವರು ಅವನಿಗೆ ಹೇಳಿದ್ದೇನಂದರೆ--ಒಬ್ಬ ಮನು ಷ್ಯನು ಎದುರಾಗಿ ಬಂದು ನಮಗೆ--ನೀವು ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ತಿರುಗಿ ಹೋಗಿ-- ಇಸ್ರಾ ಯೇಲ್ಯರಲ್ಲಿ ದೇವರು ಇಲ್ಲದೆ ಇರುವದರಿಂದಲೋ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವದಕ್ಕೆ ಕಳುಹಿಸುವದೇನು? ಇದರ ನಿಮಿತ್ತ ನೀನು ಏರಿದ ಮಂಚದಿಂದ ಇಳಿಯದೆ ನಿಶ್ಚಯವಾಗಿ ಸಾಯುವಿ ಎಂದು ಕರ್ತನು ಹೇಳುತ್ತಾನೆಂಬದಾಗಿ ಅವನಿಗೆ ಹೇಳಿರಿ ಅಂದನು.
ERVKN ಸಂದೇಶಕರು ಅಹಜ್ಯನಿಗೆ, “ಒಬ್ಬನು ನಮ್ಮನ್ನು ಭೇಟಿಯಾಗಿ” ನಿಮ್ಮನ್ನು ಕಳುಹಿಸಿದ ರಾಜನ ಬಳಿಗೆ ಹಿಂದಿರುಗಿ ಹೋಗಿ ಯೆಹೋವನು ಹೇಳುವುದನ್ನು ಅವನಿಗೆ ತಿಳಿಸಿ. ಯೆಹೋವನು ಹೇಳುವುದೇನಂದರೆ: ‘ಇಸ್ರೇಲಿನಲ್ಲಿ ಒಬ್ಬ ದೇವರಿದ್ದಾನೆ! ಹೀಗಿರುವಾಗ ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಸಂದೇಶಕರನ್ನು ಕಳುಹಿಸಿದುದೇಕೆ? ನೀನು ಈ ಕಾರ್ಯವನ್ನು ಮಾಡಿದ್ದರಿಂದ ನಿನ್ನ ಹಾಸಿಗೆಯಿಂದ ಮೇಲಕ್ಕೇಳುವುದಿಲ್ಲ. ನೀನು ಅಲ್ಲೇ ಸಾಯುವೆ!”‘ ಎಂಬುದಾಗಿ ಹೇಳಿದರು.
IRVKN ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು. PEPS