Versions
KNV ಆಗ ಅರಸನೂ ಅವನ ಸಂಗಡ ಯೆಹೂದದ ಜನರೆಲ್ಲರೂ ಯೆರೂ ಸಲೇಮಿನ ನಿವಾಸಿಗಳೆಲ್ಲರೂ ಯಾಜಕರೂ ಪ್ರವಾದಿ ಗಳೂ ಹಿರಿಕಿರಿಯರಾದ ಎಲ್ಲಾ ಜನರೂ ಕರ್ತನ ಆಲಯಕ್ಕೆ ಹೋದರು. ಅವರು ಕೇಳುವ ಹಾಗೆ ಕರ್ತನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ಪುಸ್ತಕದ ಮಾತುಗಳನೆಲ್ಲಾ ಅವನು ಓದಿದನು.
ERVKN ನಂತರ ರಾಜನು ದೇವಾಲಯಕ್ಕೆ ಹೋದನು. ಯೆಹೂದದ ಜನರೆಲ್ಲರು ಮತ್ತು ಜೆರುಸಲೇಮಿನಲ್ಲಿ ವಾಸಿಸುತ್ತಿದ್ದ ಜನರೆಲ್ಲರು ಅವನ ಜೊತೆಯಲ್ಲಿ ಹೋದರು. ಯಾಜಕರು, ಪ್ರವಾದಿಗಳು, ಚಿಕ್ಕವರು ಮತ್ತು ದೊಡ್ಡವರು ಅವನೊಡನೆ ಹೋದರು. ಆಗ ಅವನು ನಿಬಂಧನ ಗ್ರಂಥವನ್ನು ಓದಿದನು. ಇದು ದೇವಾಲಯದಲ್ಲಿ ಸಿಕ್ಕಿದ ಗ್ರಂಥವಾಗಿತ್ತು. ಜನರೆಲ್ಲರಿಗೂ ಕೇಳಿಸುವಂತೆ ಯೋಷೀಯನು ಗ್ರಂಥವನ್ನು ಓದಿದನು.
IRVKN ಅರಸನು ಯೆರೂಸಲೇಮಿನವರನ್ನೂ, ಎಲ್ಲಾ ಯೆಹೂದ್ಯರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ ಕರೆದುಕೊಂಡು ಯೆಹೋವನ ಆಲಯಕ್ಕೆ ಹೋದನು. ಚಿಕ್ಕವರು ಮೊದಲುಗೊಂಡು ದೊಡ್ಡವರವರೆಗೆ ಎಲ್ಲರೂ ಅವನನ್ನು ಹಿಂಬಾಲಿಸಿದರು. ಅಲ್ಲಿ ಅವನು ಎಲ್ಲರಿಗೂ ಕೇಳಿಸುವಂತೆ ಯೆಹೋವನ ಆಲಯದಲ್ಲಿ ಸಿಕ್ಕಿದ ಒಡಂಬಡಿಕೆಯ ನಿಬಂಧನ ಗ್ರಂಥವನ್ನು ಸಂಪೂರ್ಣವಾಗಿ ಓದಿಸಿದನು.