Versions
KNV ಆ ಮಾರ್ಗದಲಿ ಇದ್ದವರು ಗಂಡಸರಾದರೂ ಸರಿಯೇ ಹೆಂಗಸರಾದರೂ ಸರಿಯೇ ತಾನು ಅವರನ್ನು ಬಂಧಿಸಿ ಯೆರೂಸಲೇಮಿಗೆ ತರುವಂತೆ ದಮಸ್ಕದಲ್ಲಿರುವ ಆಯಾ ಸಭಾಮಂದಿರ ದವರಿಗೆ ಪತ್ರಗಳನ್ನು ಕೊಡಬೇಕೆಂದು ಅವನನ್ನು ಬೇಡಿಕೊಂಡನು.
ERVKN ದಮಸ್ಕದಲ್ಲಿ ಕ್ರಿಸ್ತನ ಮಾರ್ಗವನ್ನು ಅನುಸರಿಸುವವರನ್ನು ಕಂಡುಹಿಡಿದು, ಸ್ತ್ರೀಯರು, ಪುರುಷರು ಎನ್ನದೆ ಅವರನ್ನು ಬಂಧಿಸಿ ಜೆರುಸಲೇಮಿಗೆ ಎಳೆದುಕೊಂಡು ಬರಲು ತನಗೆ ಅಧಿಕಾರ ಕೊಟ್ಟಿರುವುದಾಗಿ ದಮಸ್ಕ ಪಟ್ಟಣದ ಸಭಾಮಂದಿರಗಳಿಗೆ ಪತ್ರಬರೆಯಬೇಕೆಂದು ಕೇಳಿಕೊಂಡನು.
IRVKN ಈ ಮಾರ್ಗವನ್ನು ಹಿಡಿದವರು ಯಾರಾದರೂ ಸಿಕ್ಕಿದರೆ ಅವರು ಗಂಡಸರಾದರೂ ಸರಿಯೇ, ಹೆಂಗಸರಾದರೂ ಸರಿಯೇ ನಾನು ಅವರಿಗೆ ಬೇಡಿಹಾಕಿಸಿ ಯೆರೂಸಲೇಮಿಗೆ ತರುವಂತೆ, ದಮಸ್ಕದಲ್ಲಿರುವ ಸಭಾಮಂದಿರದವರಿಗೆ ನೀನು, ಪತ್ರವನ್ನು ಕೊಡಬೇಕು ಎಂದು ಅವನನ್ನು ಬೇಡಿಕೊಂಡನು.