Bible Versions
Bible Books

Exodus 22:9 (WEB) World English Bible

Versions

KNV   ಎತ್ತು ಕತ್ತೆ ಕುರೀ ವಸ್ತ್ರಗಳ ವಿಷಯವಾದ ಎಲ್ಲಾ ಅಪರಾಧಗಳಿಗೋಸ್ಕರ ಇಲ್ಲವೆ ಕಳೆದು ಹೋದ ಯಾವದೇ ತರದ ವಸ್ತುಗಳ ವಿಷಯ ದಲ್ಲಿ ಒಬ್ಬನು ಇನ್ನೊಬ್ಬನ ಬಳಿಯಲ್ಲಿ ಅದನ್ನು ಕಂಡು ಇದು ತನ್ನದೆಂದು ಹೇಳಿದ ಪಕ್ಷಕ್ಕೆ ಇಬ್ಬರ ವ್ಯಾಜ್ಯವು ನ್ಯಾಯಾಧಿಪತಿಗಳ ಮುಂದೆ ಬರಬೇಕು. ನ್ಯಾಯಾಧಿ ಪತಿಗಳು ಯಾರನ್ನು ಅಪರಾಧಿಯೆಂದು ನಿರ್ಣಯಿಸು ವರೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.
ERVKN   “ಕಳೆದುಹೋದ ಎತ್ತು, ಕತ್ತೆ, ಕುರಿ, ಬಟ್ಟೆಬರೆ, ಅಥವಾ ವಸ್ತುವಿನ ವಿಷಯದಲ್ಲಿ ಒಬ್ಬನು, ‘ಇದು ನನ್ನದು’ ಎಂದು ಹೇಳಿದರೆ ಮತ್ತು ಇನ್ನೊಬ್ಬನು, ‘ಇಲ್ಲ, ಇದು ನನ್ನದು’ ಎಂದು ಹೇಳಿದರೆ, ಇವರಿಬ್ಬರೂ ದೇವರ ಸನ್ನಿಧಿಗೆ ಹೋಗಬೇಕು. ತಪ್ಪಿತಸ್ಥನಾರೆಂದು ದೇವರು ತೀರ್ಮಾನಿಸುವನು. ತಪ್ಪಿತಸ್ಥನು ಇನ್ನೊಬ್ಬನಿಗೆ ಕಳೆದುಹೋದ ವಸ್ತುವಿನ ಬೆಲೆಯ ಎರಡರಷ್ಟನ್ನು ಕೊಡಬೇಕು.
IRVKN   ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಇಬ್ಬರ ವ್ಯಾಜ್ಯವು ಅಥವಾ ನ್ಯಾಯಾಧಿಪತಿಯ ಬಳಿಗೆ ಬರಬೇಕು. ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us