Versions
KNV ಆದರೆ ಮೋಶೆಯು ಫರೋಹನಿಗೆ--ಹಾಗೆ ಮಾಡುವದು ಯುಕ್ತವಲ್ಲ, ನಮ್ಮ ಕರ್ತನಾದ ದೇವರಿಗೆ ಯಜ್ಞವನ್ನ ರ್ಪಿಸುವದು ಐಗುಪ್ತ್ಯರಿಗೆ ಅಸಹ್ಯವಾಗಿದೆ; ಇಗೋ, ಐಗುಪ್ತ್ಯರಿಗೆ ಅಸಹ್ಯವಾಗಿರುವದನ್ನು ಅವರ ಕಣ್ಣೆ ದುರಿಗೆ ಅರ್ಪಿಸಿದರೆ ಅವರು ನಮಗೆ ಕಲ್ಲೆಸೆದಾರು.
ERVKN ಅದಕ್ಕೆ ಮೋಶೆ, “ಅದು ಸರಿಯಲ್ಲ. ನಮ್ಮ ದೇವರಾದ ಯೆಹೋವನಿಗೆ ನಾವು ಅರ್ಪಿಸುವ ಯಜ್ಞಗಳು ಈಜಿಪ್ಟಿನವರಿಗೆ ನಿಷಿದ್ಧವಾಗಿವೆ. ಹೀಗಿರಲು ಅವರ ಕಣ್ಣೆದುರಿಗೇ ಅಂಥ ಯಜ್ಞಗಳನ್ನು ಅರ್ಪಿಸಿದರೆ, ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವುದಿಲ್ಲವೇ?
IRVKN ಆದರೆ ಮೋಶೆ, “ಹಾಗೆ ಮಾಡುವುದು ಸರಿಯಲ್ಲ, ನಮ್ಮ ದೇವರಾದ ಯೆಹೋವನಿಗೆ ನಾವು ಯಜ್ಞವನ್ನರ್ಪಿಸುವುದು ಐಗುಪ್ತ್ಯರಿಗೆ ಅಸಹ್ಯವಾಗಿದೆ. ಐಗುಪ್ತ್ಯರಿಗೆ ಅಸಹ್ಯವಾಗಿರುವುದನ್ನು ಅವರ ಕಣ್ಣೆದುರಿಗೆ ಯಜ್ಞ ಅರ್ಪಿಸಿದರೆ ಅವರು ನಮ್ಮನ್ನು ಕಲ್ಲೆಸೆದು ಕೊಲ್ಲುವರಲ್ಲವೇ?