Versions
KNV ಪರಿಶುದ್ಧ ಕಾಣಿಕೆಗೂ ಪಟ್ಟಣದ ಸ್ವಾಸ್ತ್ಯಕ್ಕೂ ಈ ಕಡೆಗೂ ಆ ಕಡೆಗೂ ಮಿಕ್ಕಾದದ್ದು ಕಾಣಿಕೆಯ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪೂರ್ವದ ಮೇರೆಯಲ್ಲಿರು ವಂಥದ್ದೂ ಪಶ್ಚಿಮದಲ್ಲಿ ಇಪ್ಪತ್ತೈದು ಸಾವಿರ ಮೊಳಕ್ಕೆ ಎದುರಾಗಿ ಪಶ್ಚಿಮದ ಮೇರೆಯಲ್ಲಿರುವಂತದ್ದೂ ಪ್ರಧಾನನಿಗಾದ ಪಾಲಿಗೆ ಎದುರಾಗಿಯೂ ಇರಬೇಕು. ಅದು ಪರಿಶುದ್ಧ ಕಾಣಿಕೆಯೇ; ಆಲಯದ ಪರಿಶುದ್ಧ ಸ್ಥಳವೂ ಅದರ ಮಧ್ಯದಲ್ಲಿ ಇರಬೇಕು.
ERVKN This verse may not be a part of this translation
IRVKN ಮೀಸಲಾದ ಪವಿತ್ರ ಕ್ಷೇತ್ರದ ಮತ್ತು ಪಟ್ಟಣಕ್ಕೆ ಒಳಪಟ್ಟ ಭೂಮಿಯ ಎರಡು ಕಡೆಗಳಲ್ಲಿ ಉಳಿದ ಭೂಮಿಯು ಅರಸನ ಪಾಲಾಗಿರಲಿ. ಆ ಪಾಲು ಮೀಸಲಾದ ಕ್ಷೇತ್ರದ ಪೂರ್ವದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯ ಪಶ್ಚಿಮದ ಕಡೆಗೆ ಇಪ್ಪತ್ತೈದು ಸಾವಿರ ಮೊಳ ಉದ್ದವು, ಮೇರೆಯ ಪಕ್ಕದಲ್ಲಿಯೂ ಕುಲಗಳ ಪಾಲಿನಷ್ಟು ಉದ್ದವಾಗಿ ಹಬ್ಬುವುದು; ಅದು ಪ್ರಭುವಿಗೆ ಸೇರತಕ್ಕದ್ದು. ಪವಿತ್ರಾಲಯವೂ ಮೀಸಲಾದ ಪವಿತ್ರ ಕ್ಷೇತ್ರದ ಮಧ್ಯದಲ್ಲಿರುವುದು.