Versions
KNV ಅದಕ್ಕೆ ಲಾಬಾನನು--ನಿನಗೆ ನಾನು ಏನು ಕೊಡಲಿ ಅಂದಾಗ ಯಾಕೋಬನು--ಏನೂ ಕೊಡ ಬೇಡ, ಇದು ಮಾತ್ರ ನೀನು ನನಗಾಗಿ ಮಾಡಿದರೆ ನಾನು ತಿರಿಗಿ ನಿನ್ನ ಮಂದೆಯನ್ನು ಮೇಯಿಸಿ ಕಾಯುವೆನು;
ERVKN ಲಾಬಾನನು “ಹಾಗಾದರೆ ನಾನು ನಿನಗೇನು ಕೊಡಬೇಕು” ಎಂದು ಕೇಳಿದನು. ಯಾಕೋಬನು, “ನೀನು ನನಗೆ ಏನೂ ಕೊಡಬೇಕಾಗಿಲ್ಲ. (ನಾನು ಕೆಲಸ ಮಾಡಿದ್ದಕ್ಕೆ ನೀನು ಸಂಬಳ ಕೊಟ್ಟರೆ ಸಾಕು.) ಇದೊಂದು ಕಾರ್ಯವನ್ನು ಮಾಡು; ನಾನು ಹೋಗಿ ನಿನ್ನ ಕುರಿಗಳನ್ನು ನೋಡಿಕೊಳ್ಳುವೆ.
IRVKN ಅದಕ್ಕೆ ಲಾಬಾನನು, “ನಿನಗೆ ನಾನೇನು ಕೊಡಬೇಕು ಹೇಳು” ಅನ್ನಲು ಯಾಕೋಬನು, “ನನಗೆ ಏನೂ ಕೊಡಬೇಡ, ನೀನು ನನಗೆ ಈ ಒಂದು ಕಾರ್ಯ ಮಾತ್ರ ಮಾಡಿದರೆ ಸಾಕು, ನಾನು ಪುನಃ ನಿನ್ನ ಹಿಂಡನ್ನು ಮೇಯಿಸಿ ಕಾಯುವೆನು”