Versions
KNV ಆ ಕಾಲದಲ್ಲಿ ಹಿಜ್ಕೀಯನು ರೋಗಿಯಾಗಿ ಸಾಯುವದಕ್ಕಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ--ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡಿಕೋ; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಕರ್ತನು ಹೇಳುತ್ತಾನೆ ಎಂದು ಹೇಳಿದನು.
ERVKN ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದುದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ”‘ ಎಂದು ಹೇಳಿದನು.
IRVKN {ಹಿಜ್ಕೀಯನ ರೋಗನಿವಾರಣೆ} PS ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ, “ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆ ಮಾಡು. ಏಕೆಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬುದಾಗಿ ಯೆಹೋವನು ಹೇಳುತ್ತಾನೆ” ಎಂದು ಹೇಳಿದನು.