Versions
KNV ಆತನು ಪೀಡಿಸಲ್ಪಟ್ಟವನೂ ಮತ್ತು ಹಿಂಸಿಸಲ್ಪಟ್ಟವನೂ ಆಗಿದ್ದನು. ಆದರೂ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ; ವಧಿಸುವದಕ್ಕೆ ತರಲ್ಪ ಡುವ ಕುರಿಮರಿಯಂತೆಯೂ ಉಣ್ಣೆ ಕತ್ತರಿಸುವವರ ಮುಂದೆ ಇದ್ದ ಕುರಿಯ ಹಾಗೆಯೂ ಆತನು ಮೌನ ವಾಗಿದ್ದನು. ಹೀಗೆ ಆತನು ತನ್ನ ಬಾಯನ್ನು ತೆರೆಯಲೇ ಇಲ್ಲ.
ERVKN ಆತನು ಬಾಧೆಯನ್ನೂ ಹಿಂಸೆಯನ್ನೂ ಅನುಭವಿಸಿದನು. ಆದರೂ ಆತನು ಪ್ರತಿಭಟಿಸಲಿಲ್ಲ. ಕೊಯ್ಯಲು ಕೊಂಡೊಯ್ಯುವ ಕುರಿಮರಿಯಂತೆಯೂ ಉಣ್ಣೆಯನ್ನು ಕತ್ತರಿಸುವಾಗ ಮೌನವಾಗಿರುವ ಕುರಿಮರಿಯಂತೆಯೂ ಆತನು ಮೌನವಾಗಿದ್ದನು.
IRVKN ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ;
ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು,
ಬಾಯಿ ತೆರೆಯಲೇ ಇಲ್ಲ.