Versions
KNV ನಾವು ಉಪವಾಸ ಮಾಡಿದ್ದೇವೆ, ನೀನು ಯಾಕೆ ನೋಡುವದಿಲ್ಲ? ನಮ್ಮ ಪ್ರಾಣವನ್ನು ಕುಂದಿಸಲು ನೀನು ಗಮನಿಸದಿರುವದೇಕೆ ಎಂದು ಅವರು ಅಂದು ಕೊಳ್ಳುತ್ತಾರೆ; ಇಗೋ, ನಿಮ್ಮ ಉಪವಾಸದ ದಿನದಲ್ಲಿ ನಿಮ್ಮ ಇಷ್ಟವನ್ನು ತೀರಿಸುತ್ತೀರಿ ಮತ್ತು ನಿಮ್ಮ ಎಲ್ಲಾ ದುಡಿತವನ್ನು ನಿರ್ಬಂಧಿಸುತ್ತೀರಿ.
ERVKN ಈಗ ಆ ಜನರು ಹೀಗೆ ಹೇಳುತ್ತಾರೆ, “ನಾವು ನಿನ್ನನ್ನು ಗೌರವಿಸಲು ಉಪವಾಸಮಾಡಿದೆವು. ನೀನು ನಮ್ಮನ್ನೇಕೆ ಗಮನಿಸುವದಿಲ್ಲ? ನಿನ್ನನ್ನು ಗೌರವಿಸುವದಕ್ಕಾಗಿ ನಾವು ನಮ್ಮ ದೇಹಗಳನ್ನು ದಂಡಿಸಿದೆವು. ನೀನೇಕೆ ನಮ್ಮನ್ನು ಗಮನಿಸುವದಿಲ್ಲ?” ಆದರೆ ಯೆಹೋವನು ಹೇಳುವದೇನೆಂದರೆ: “ವಿಶೇಷ ದಿವಸಗಳಲ್ಲಿ ನಿಮ್ಮ ಇಷ್ಟಾನುಸಾರ ಉಪವಾಸ ಮಾಡುವಿರಿ. ನೀವು ನಿಮ್ಮ ಸ್ವಂತ ದೇಹಗಳನ್ನು ದಂಡಿಸದೆ ನಿಮ್ಮ ಸೇವಕರನ್ನು ದಂಡಿಸುತ್ತಿದ್ದೀರಿ.
IRVKN “ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ,
ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ.
ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ.