Versions
KNV ಯೆಹೋಶುವನು ಬೆಳಿಗ್ಗೆ ಎದ್ದು ಅವನೂ ಇಸ್ರಾಯೇಲ್ ಮಕ್ಕಳೆಲ್ಲರೂ ಶಿಟ್ಟೀಮಿ ನಿಂದ ಪ್ರಯಾಣಮಾಡಿ ಯೊರ್ದನಿನ ಬಳಿಗೆ ಬಂದು ಅದನ್ನು ದಾಟುವದಕ್ಕಿಂತ ಮುಂಚೆ ಅಲ್ಲಿ ಇಳು ಕೊಂಡರು.
ERVKN ಮರುದಿನ, ಬೆಳಗಿನ ಜಾವದಲ್ಲಿ ಯೆಹೋಶುವನು ಮತ್ತು ಎಲ್ಲಾ ಇಸ್ರೇಲರು ಎದ್ದು ಆಕಾಶಿಯದಿಂದ ಹೊರಟು ಜೋರ್ಡನ್ ನದಿಯವರೆಗೆ ಬಂದರು. ಅವರು ಜೋರ್ಡನ್ ನದಿಯನ್ನು ದಾಟುವ ಮೊದಲು ಅಲ್ಲಿ ಪಾಳೆಯ ಮಾಡಿಕೊಂಡರು.
IRVKN {ಯೊರ್ದನ್ ನದಿಯನ್ನು ದಾಟಿದ್ದು} PS ಯೆಹೋಶುವನು ಬೆಳಗಿನ ಜಾವದಲ್ಲೇ ಎದ್ದನು; ಅವನೊಂದಿಗೆ ಇಸ್ರಾಯೇಲ್ಯರೆಲ್ಲರೂ ಶಿಟ್ಟೀಮನ್ನು ಬಿಟ್ಟು ಯೊರ್ದನಿಗೆ ಬಂದು ಅದನ್ನು ದಾಟುವ ಮೊದಲು ಅಲ್ಲೇ ಇಳಿದುಕೊಂಡರು.