Versions
KNV ದೆಬೋರಳು ಬಾರಾಕನಿಗೆ--ನೀನು ಏಳು; ಕರ್ತನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸಿಕೊಡುವ ದಿನವು ಇದೇ; ಕರ್ತನು ನಿನ್ನ ಮುಂದೆ ಹೊರಡಲಿಲ್ಲವೋ ಅಂದಳು. ಹೀಗೆ ಬಾರಾಕನು ತನ್ನ ಹಿಂದೆ ಹತ್ತು ಸಾವಿರ ಜನರನ್ನು ತೆಗೆದುಕೊಂಡು ತಾಬೋರ್ ಬೆಟ್ಟ ದಿಂದ ಇಳಿದನು.
ERVKN ಆಗ ದೆಬೋರಳು ಬಾರಾಕನಿಗೆ, “ಈ ದಿನ ಯೆಹೋವನು ಸೀಸೆರನನ್ನು ಸೋಲಿಸಲು ನಿನಗೆ ಸಹಾಯ ಮಾಡುತ್ತಾನೆ. ಯೆಹೋವನು ನಿನಗಾಗಿ ದಾರಿಯನ್ನು ಸುಗಮಗೊಳಿಸಿದ್ದಾನೆಂಬುದು ನಿನಗೆ ಖಚಿತವಾಗಿ ಗೊತ್ತಿದೆ” ಎಂದು ಹೇಳಿದಳು. ಆದ್ದರಿಂದ ಬಾರಾಕನು ಹತ್ತು ಸಾವಿರ ಜನರೊಂದಿಗೆ ತಾಬೋರ್ ಬೆಟ್ಟದಿಂದ ಇಳಿದನು.
IRVKN ಆಗ ದೆಬೋರಳು ಬಾರಾಕನಿಗೆ, “ಏಳು, ಯೆಹೋವನು ಸೀಸೆರನನ್ನು ನಿನ್ನ ಕೈಗೆ ಒಪ್ಪಿಸುವ ದಿನವು ಇಂದೇ. ನಿಶ್ಚಯವಾಗಿ ಆತನು ತಾನೇ ನಿನಗೆ ಮುಂದಾಗಿ ಯುದ್ಧಕ್ಕೆ ಹೊರಡುವನು” ಅನ್ನಲು ಬಾರಾಕನು ಬೇಗನೆ ಹತ್ತು ಸಾವಿರ ಜನರ ಸಹಿತವಾಗಿ ತಾಬೋರ್ ಬೆಟ್ಟದಿಂದ ಇಳಿದನು.