Versions
KNV ಹಾಗೆಯೇ ಅವನ ತಾಯಿಯ ಸಹೋದರರು ಅವನನ್ನು ಕುರಿತು ಶೆಕೆಮಿನ ಜನರೆಲ್ಲರ ಕಿವಿಗಳಲ್ಲಿ ಈ ಮಾತುಗಳನ್ನೆಲ್ಲಾ ಆಡಿದರು. ಅವರು ಇವನನ್ನು ತಮ್ಮ ಸಹೋದರನೆಂದು ಹೇಳಿ ದ್ದರಿಂದ ಆ ಜನರ ಹೃದಯವು ಅಬೀಮೆಲೆಕನ ಕಡೆಗೆ ತಿರುಗಿತು.
ERVKN ಅಬೀಮೆಲೆಕನ ಸೋದರ ಮಾವಂದಿರು ಶೆಕೆಮಿನ ಹಿರಿಯರ ಜೊತೆ ಮಾತನಾಡಿ ಅವರಿಗೆ ಆ ಪ್ರಶ್ನೆಯನ್ನು ಕೇಳಿದರು. ಶೆಕೆಮಿನ ಹಿರಿಯರು ಅಬೀಮೆಲೆಕನ ಪಕ್ಷವಹಿಸಲು ನಿರ್ಧರಿಸಿದರು. ಆ ಹಿರಿಯರು, “ಎಷ್ಟೇ ಆದರೂ ಅವನು ನಮ್ಮ ಸಹೋದರ” ಎಂದರು.
IRVKN ಅವರು ಶೆಕೆಮಿನ ಹಿರಿಯರ ಬಳಿಗೆ ಹೋಗಿ ಅಬೀಮೆಲೆಕನ ವಿಷಯದಲ್ಲಿ ಹಾಗೆಯೇ ಹೇಳಲು ಅವರು, “ಇವನು ನಮ್ಮ ಸಹೋದರನಾಗಿದ್ದಾನಲ್ಲಾ” ಅಂದುಕೊಂಡು ಅವನ ಪಕ್ಷವನ್ನು ಹಿಡಿಯುವುದಕ್ಕೆ ಒಪ್ಪಿಕೊಂಡರು.