Versions
KNV ಆತನು ಈ ವಿಷಯಗಳನ್ನು ಅವರೊಂದಿಗೆ ಮಾತನಾಡುತ್ತಿದ್ದಾಗ ಇಗೋ, ಒಬ್ಬ ಅಧಿಕಾರಿಯು ಬಂದು ಆತನನ್ನು ಆರಾಧಿಸಿ--ನನ್ನ ಮಗಳು ಇದೀಗಲೇ ಸತ್ತು ಹೋಗಿರುವಳು; ಆದರೆ ನೀನು ಬಂದು ಆಕೆಯ ಮೇಲೆ ನಿನ್ನ ಕೈಯನ್ನಿಡು; ಆಗ ಅವಳು ಬದುಕುವಳು ಎಂದು ಹೇಳಿದನು.
ERVKN ಯೇಸು ಈ ಸಂಗತಿಗಳನ್ನು ಹೇಳುತ್ತಿರುವಾಗ ಸಭಾಮಂದಿರದ ಅಧಿಕಾರಿಯೊಬ್ಬನು ಆತನ ಬಳಿಗೆ ಬಂದು ಆತನಿಗೆ ಬಾಗಿ ನಮಸ್ಕರಿಸಿ, “ನನ್ನ ಮಗಳು ಈಗ ತಾನೇ ಸತ್ತುಹೋದಳು. ನೀನು ಬಂದು ಅವಳನ್ನು ಮುಟ್ಟಿದರೆ ಅವಳು ಮತ್ತೆ ಜೀವಂತಳಾಗುವಳು” ಎಂದು ಹೇಳಿದನು.
IRVKN ಹೀಗೆ ಯೇಸು ಅವರೊಂದಿಗೆ ಮಾತನಾಡುತ್ತಿರುವಾಗ ಒಬ್ಬ ಅಧಿಕಾರಿಯು ಬಂದು ಆತನಿಗೆ ಅಡ್ಡಬಿದ್ದು, “ನನ್ನ ಮಗಳು ಈಗಲೇ ತೀರಿಹೋದಳು; ಆದಾಗ್ಯೂ ನೀನು ಬಂದು ಆಕೆಯ ಮೇಲೆ ಕೈ ಇಟ್ಟರೆ ಬದುಕುವಳು” ಎಂದು ಬೇಡಿಕೊಂಡನು.