Versions
KNV ಆದದರಿಂದ ನೀನು ಬಾಧಿಸುವ ವಿರೋಧಿಗಳ ಕೈಯಲ್ಲಿ ಅವರನ್ನು ಒಪ್ಪಿಸಿದಿ. ಆದರೆ ತಮ್ಮ ಇಕ್ಕಟ್ಟಿನ ಕಾಲದಲ್ಲಿ ಅವರು ನಿನ್ನನ್ನು ಕೂಗಿದಾಗ ನೀನು ಪರಲೋಕದಿಂದ ಕೇಳಿ, ನಿನ್ನ ಅಧಿಕವಾದ ಕರುಣೆಯ ಪ್ರಕಾರ ಅವರ ವೈರಿಗಳ ಕೈಯಿಂದ ರಕ್ಷಿಸುವದಕ್ಕೆ, ರಕ್ಷಕರನ್ನು ಅವರಿಗೆ ಕೊಟ್ಟಿ.
ERVKN ಆದುದರಿಂದ ಅವರ ಶತ್ರುಗಳು ಅವರನ್ನು ಸದೆಬಡಿಯುವಂತೆ ಮಾಡಿದೆ. ವೈರಿಗಳು ಅವರಿಗೆ ತುಂಬಾ ಕಷ್ಟಕೊಟ್ಟರು. ಕಷ್ಟಬಂದಾಗ ನಮ್ಮ ಪೂರ್ವಿಕರು ನಿನಗೆ ಮೊರೆಯಿಟ್ಟರು. ಪರಲೋಕದಿಂದ ನೀನು ಅವರನ್ನು ಆಲೈಸಿದೆ. ನಿನ್ನ ಮಹಾ ಕರುಣೆಗನುಸಾರವಾಗಿ ನೀನು ಅವರ ಬಳಿಗೆ ಜನರನ್ನು ಕಳುಹಿಸಿ ಅವರನ್ನು ಅವರ ವೈರಿಗಳ ಕೈಗಳಿಂದ ರಕ್ಷಿಸಿದೆ.