Versions
KNV ನಿಶ್ಚಿಂತೆಯಾಗಿ ವಾಸಿಸಿದಂಥ ತಾನೇ ಹೊರತು ಮತ್ತೊಂದಿಲ್ಲವೆಂದು ತನ್ನೊಳಗೆ ಅಂದುಕೊಂಡಂಥ ಉಲ್ಲಾಸದ ಪಟ್ಟಣವು ಇದೇ. ಅದು ಎಷ್ಟೋ ಹಾಳಾಯಿತು; ಮೃಗಗಳು ಮಲಗಿಕೊಳ್ಳುವ ಸ್ಥಳವಾಯಿತು. ಅದನ್ನು ಹಾದು ಹೋಗುವವರೆಲ್ಲರು ಸಿಳ್ಳಿಟ್ಟು ಕೈ ಅಲ್ಲಾಡಿಸುವರು.
ERVKN ಈ ನಿನೆವೆಯು ಸಂತೋಷಭರಿತ ನಗರಿಯಾಗಿದೆ. ಅದರ ನಿವಾಸಿಗಳು ತಾವು ಸುರಕ್ಷಿತರಾಗಿದ್ದೇವೆಂದು ತಿಳಿದಿದ್ದಾರೆ. ನಿನೆವೆಯು ಲೋಕದಲ್ಲಿ ಅತ್ಯಂತ ಮಹತ್ವಪೂರ್ಣ ಸ್ಥಳವೆಂದು ತಿಳಿದಿದ್ದಾರೆ. ಅವರು ಬಹಳ ಗರ್ವಪಡುತ್ತಾರೆ. ಆದರೆ ಆ ನಗರವು ನಾಶವಾಗುವದು. ಕಾಡುಮೃಗಗಳ ಹಕ್ಕೆಯಾಗುವದು. ದಾಟಿಹೋಗುವ ಜನರು, ತಮ್ಮ ಆಶ್ಚರ್ಯವನ್ನು ಸಿಳ್ಳು ಹಾಕಿ ತಲೆಯಾಡಿಸಿ “ಎಂಥಾ ದುರ್ಗತಿ” ಎಂದು ಉದ್ಗರಿಸುವರು.
IRVKN ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು
ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು;
ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ!
ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ. PE