Bible Versions
Bible Books

1 Chronicles 12:19 (YLT) Young's Literal Translation

Versions

KNV   ದಾವೀದನು ಸೌಲನ ಮೇಲೆ ಯುದ್ಧ ಮಾಡಲು ಫಿಲಿಷ್ಟಿಯರ ಸಂಗಡ ಬರುತ್ತಿರುವಾಗ ಮನಸ್ಸೆಯವರಲ್ಲಿ ಕೆಲವರು ದಾವೀದನ ಕಡೆಗೆ ಸೇರಿದರು. ಆದರೆ ಇವರು ಅವರಿಗೆ ಸಹಾಯ ಮಾಡದೆ ಇದ್ದರು. ಫಿಲಿಷ್ಟಿಯರ ಅಧಿಪತಿಗಳು ಯೋಚನೆ ಮಾಡಿದ ತರುವಾಯ-- ಅವನು ನಮಗೆ ಮೋಸಮಾಡಿ ತನ್ನ ಯಜಮಾನನಾದ ಸೌಲನ ಕಡೆಗೆ ಸೇರಿಕೊಳ್ಳುವನೆಂದು ಹೇಳಿ ಅವನನ್ನು ಕಳುಹಿಸಿಬಿಟ್ಟರು.
ERVKN   ಮನಸ್ಸೆಕುಲದಿಂದಲೂ ಕೆಲವರು ದಾವೀದನನ್ನು ಸೇರಿಕೊಂಡರು. ದಾವೀದನು ಸೌಲನೊಂದಿಗೆ ಯುದ್ಧಮಾಡಲು ಫಿಲಿಷ್ಟಿಯರೊಂದಿಗೆ ಸೇರಿಕೊಂಡಾಗ ಮನಸ್ಸೆಯವರು ದಾವೀದನ ಬಳಿಗೆ ಬಂದರು. ದಾವೀದನೂ ಅವನ ಜನರೂ ನಿಜವಾಗಿಯೂ ಫಿಲಿಷ್ಟಿಯರಿಗೆ ಸಹಾಯಮಾಡಿರಲಿಲ್ಲ. ಫಿಲಿಷ್ಟಿಯ ಪ್ರಧಾನರು ದಾವೀದನು ಯುದ್ಧಕ್ಕೆ ಬರಬಾರದೆಂದು ಹೇಳಿ ಹಿಂದಕ್ಕೆ ಕಳುಹಿಸಿದರು. “ಇವನು ತನ್ನ ಅರಸನೊಟ್ಟಿಗೆ ಸೇರಿದರೆ ನಮ್ಮ ರುಂಡಗಳೇ ಕತ್ತರಿಸಲ್ಪಡುವವು” ಎಂದರು.
IRVKN   ಸೌಲನಿಗೆ ವಿರುದ್ಧವಾಗಿ ಯುದ್ಧಕ್ಕೆ ಹೋಗುವ ಫಿಲಿಷ್ಟಿಯರ ಜೊತೆಯಲ್ಲಿ ದಾವೀದನೂ ಹೋಗುತ್ತಿರುವಾಗ ಕೆಲವು ಜನ ಮನಸ್ಸೆಯವರು ಬಂದು ಅವನೊಡನೆ ಸೇರಿಕೊಂಡರು. ದಾವೀದನು ನಿಜವಾಗಿ ಫಿಲಿಷ್ಟಿಯರಿಗೆ ಸಹಾಯಕನು ಆಗಿರಲಾರನೆಂದು, ಅವರ ಪ್ರಭುಗಳು, “ಇವನು ನಮ್ಮ ತಲೆಗಳನ್ನು ಕಡಿದು ತಿರುಗಿ ತನ್ನ ಯಜಮಾನನಾದ ಸೌಲನೊಂದಿಗೆ ಸೇರಿಕೊಂಡಾನು” ಎಂಬುದಾಗಿ ಆಲೋಚಿಸಿ ಅವನನ್ನು ಹಿಂದಕ್ಕೆ ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us