Versions
KNV ಇದಲ್ಲದೆ ಕೋರಹನ ಮಗನಾದ ಎಬ್ಯಾಸಾಫನ ಮಗನಾದ ಕೋರೇಯ ಮಗನಾದ ಶಲ್ಲೂಮನೂ ಅವನ ತಂದೆಯ ಮನೆಯವರಾಗಿರುವ ತನ್ನ ಸಹೋ ದರರಾದ ಕೋರಹಿಯರೂ ಸೇವೆಯ ಕೆಲಸದ ಮೇಲೆ ಇದ್ದು ಗುಡಾರದ ಬಾಗಲಿನ ಕಾವಲುಗಾರರಾಗಿದ್ದರು. ಅವರ ಪಿತೃಗಳು ಕರ್ತನ ಸೈನ್ಯದ ಮೇಲೆ ಇದ್ದು ಪ್ರವೇಶ ಸ್ಥಳದ ಕಾವಲಿನವರಾಗಿದ್ದರು.
ERVKN ಶಲ್ಲೂಮನು ಕೋರೇಯ ಮಗನು. ಕೋರೇಯ ಎಬ್ಯಾಸಾಫನ ಮಗನು. ಎಬ್ಯಾಸಾಫನು ಕೋರಹನ ಮಗನು. ಶಲ್ಲೂಮನೂ ಅವನ ಸಹೋದರರೂ ದ್ವಾರಪಾಲಕರಾಗಿದ್ದರು. ಅವರೆಲ್ಲರೂ ಕೋರಹನ ಸಂತತಿಯವರು. ಪವಿತ್ರಗುಡಾರದ ಬಾಗಿಲುಗಳನ್ನು ಕಾಯುವ ಜವಾಬ್ದಾರಿಕೆ ಇವರದಾಗಿತ್ತು. ತಮ್ಮ ಪೂರ್ವಿಕರು ಮಾಡಿದ್ದಂತೆಯೇ ಅವರು ಈ ಕೆಲಸವನ್ನು ಮಾಡಿದರು. ಯೆಹೋವನ ಪಾಳೆಯದ ಪ್ರವೇಶದ್ವಾರವನ್ನು ಕಾಯುವುದು ಅವರ ಪೂರ್ವಿಕರ ಉದ್ಯೋಗವಾಗಿತ್ತು.