Versions
KNV ಈಗ ನಾವು ಕನ್ನಡಿಯಲ್ಲಿ ಮೊಬ್ಬಾಗಿ ನೋಡುತ್ತೇವೆ. ತರುವಾಯ ಮುಖಾಮುಖಿ ಯಾಗಿ ನೋಡುವೆವು; ಈಗ ನಾನು ಅಪೂರ್ಣವಾಗಿ ತಿಳಿದಿದ್ದೇನೆ. ತರುವಾಯ ದೇವರು ನನ್ನನ್ನು ತಿಳಿದು ಕೊಂಡಂತೆಯೇ ನಾನೂ ತಿಳಿದುಕೊಳ್ಳುತ್ತೇನೆ.
ERVKN ನಮಗೂ ಸಹ ಇದು ಅನ್ವಯಿಸುತ್ತದೆ. ಕನ್ನಡಿಯಲ್ಲಿ ಕೇವಲ ಪ್ರತಿಬಿಂಬ ಕಾಣುವಂತೆ ಈಗ ನಾವು ನೋಡುತ್ತಿದ್ದೇವೆ. ಆದರೆ ಮುಂದಿನ ಕಾಲದಲ್ಲಿ ನಾವು ಮುಖಾಮುಖಿಯಾಗಿ ಕಾಣುತ್ತೇವೆ. ಈಗ ನನಗೆ ತಿಳಿದಿರುವುದು ಕೇವಲ ಒಂದು ಭಾಗವಷ್ಟೆ, ಆದರೆ ಆ ಕಾಲದಲ್ಲಿ ದೇವರು ನನ್ನನ್ನು ತಿಳಿದಿರುವಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.
IRVKN ಈಗ ಕನ್ನಡಿಯಲ್ಲಿ ಕಾಣಿಸುವಂತೆ ದೇವರ ಮುಖವು ನಮಗೆ ಮೊಬ್ಬಾಗಿ ಕಾಣಿಸುತ್ತದೆ, ಆದರೆ ಆಗ ನೇರವಾಗಿ ಮುಖಾಮುಖಿಯಾಗಿ ಆತನನ್ನು ನೋಡುವೆವು. ಈಗ ಅಪೂರ್ಣವಾಗಿ ನನಗೆ ತಿಳಿದಿದೆ. ಆದರೆ ಆಗ ದೇವರು ನನ್ನನ್ನು ಸಂಪೂರ್ಣವಾಗಿ ತಿಳಿದುಕೊಂಡಂತೆ ನಾನು ಸಂಪೂರ್ಣವಾಗಿ ತಿಳಿದುಕೊಳ್ಳುವೆನು.