Versions
KNV ಅವನು ಆ ಪೀಠಕ್ಕೆ ವಿರೋಧವಾಗಿ ಕರ್ತನ ಮಾತಿನಲ್ಲಿ ಕೂಗಿ--ಪೀಠವೇ, ಪೀಠವೇ, ಇಗೋ, ದಾವೀದನ ಸಂತಾನದಲ್ಲಿ ಯೋಷೀಯನೆಂದು ಹೆಸರುಳ್ಳ ಒಬ್ಬ ಕುಮಾರನು ಹುಟ್ಟುವನು; ಅವನು ನಿನ್ನ ಮೇಲೆ ಧೂಪವನ್ನರ್ಪಿಸುವ ಉನ್ನತ ಸ್ಥಳಗಳ ಯಾಜಕರನ್ನು ಬಲಿಯಾಗಿ ಅರ್ಪಿಸುವನು; ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವೆಂದು ಕರ್ತನು ಹೇಳುತ್ತಾನೆ ಅಂದನು.
ERVKN ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಇಂತೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪ ಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪ ಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.”
IRVKN ಆಗ ಆ ಮನುಷ್ಯನು ಯೆಹೋವನ ಅಪ್ಪಣೆಯಿಂದ ಯಜ್ಞವೇದಿಯನ್ನು ಕುರಿತು, “ವೇದಿಯೇ, ವೇದಿಯೇ, ದಾವೀದನ ಸಂತಾನದಲ್ಲಿ ಯೋಷೀಯನು ಎಂಬ ಒಬ್ಬ ಮನುಷ್ಯನು ಹುಟ್ಟುವನು. ಅವನು ನಿನ್ನ ಮೇಲೆ ಧೂಪಹಾಕುವ ಪೂಜಾಸ್ಥಳಗಳ ಯಾಜಕರನ್ನು ಹಿಡಿದು, ಅವರನ್ನು ನಿನ್ನ ಮೇಲೆಯೇ ಯಜ್ಞಮಾಡುವನು. ಮನುಷ್ಯರ ಎಲುಬುಗಳು ನಿನ್ನ ಮೇಲೆ ಸುಡಲ್ಪಡುವವು ಎಂದು ಯೆಹೋವನು ಹೇಳುತ್ತಾನೆ” ಅಂದನು.