Versions
KNV ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು.
ERVKN ರಾಜನಾದ ಬೆನ್ಹದದನು ರಾಜನಾದ ಆಸನ ಜೊತೆ ಒಪ್ಪಂದ ಮಾಡಿಕೊಂಡನು. ಆದುದರಿಂದ ಅವನು ತನ್ನ ಸೈನ್ಯವನ್ನು ಇಸ್ರೇಲಿನ ಪಟ್ಟಣಗಳ ವಿರುದ್ದ ಹೋರಾಡಲು ಕಳುಹಿಸಿದನು. ಬೆನ್ಹದದನು ಇಯ್ಯೋನ್, ದಾನ್, ಅಬೇಲ್ಬೇತ್ಮಾಕಾ ಪಟ್ಟಣಗಳನ್ನು ಮತ್ತು ಗಲಿಲಾಯ ಸರೋವರದ ಸುತ್ತಲಿನ ಎಲ್ಲಾ ಪಟ್ಟಣಗಳನ್ನು ಸೋಲಿಸಿದನು. ಅವನು ನಫ್ತಾಲಿ ಪ್ರದೇಶವನ್ನೆಲ್ಲ ಸೋಲಿಸಿದನು.
IRVKN ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ತನ್ನ ಸೈನ್ಯಾಧಿಪತಿಗಳನ್ನು ಯುದ್ಧಕ್ಕಾಗಿ ಇಸ್ರಾಯೇಲರ ಪಟ್ಟಣಗಳಿಗೆ ಕಳುಹಿಸಿದನು. ಇವರು ಇಯ್ಯೋನ್, ದಾನ್, ಆಬೇಲ್ಬೇತ್ಮಾಕಾ, ಕಿನ್ನೆರೋತ್ ಪ್ರದೇಶ, ನಫ್ತಾಲ್ಯರ ಎಲ್ಲಾ ಪ್ರಾಂತ್ಯ ಇವುಗಳನ್ನು ಹಾಳುಮಾಡಿದರು.