Versions
KNV ಈಗ ಆ ಮನುಷ್ಯರು ಅವನ ಮಾತಿನಲ್ಲಿ ಏನಾದರೂ ಬಂದೀತೆಂದು ಜಾಗ್ರೆತೆ ಯಿಂದ ನೋಡಿಕೊಂಡು ಅದನ್ನು ಅವಸರದಿಂದ ಹಿಡಿದರು. ಅವರು--ನಿನ್ನ ಸಹೋದರನಾದ ಬೆನ್ಹದ ದನು ಎಂದು ಹೇಳಿದರು. ಆಗ ಅವನು--ನೀವು ಹೋಗಿ ಅವನನ್ನು ಕರೆತನ್ನಿರಿ ಅಂದನು. ಬೆನ್ಹದದನು ಅವನ ಬಳಿಗೆ ಬಂದಾಗ ಅವನು ಇವನನ್ನು ರಥದ ಲ್ಲೇರ ಮಾಡಿದನು.
ERVKN ರಾಜನಾದ ಅಹಾಬನು ತಾನು ಬೆನ್ಹದದನನ್ನು ಕೊಲ್ಲುವುದಿಲ್ಲವೆಂಬುದನ್ನು ಯಾವುದಾದರೂ ಸೂಚನೆಯ ಮೂಲಕ ತಿಳಿಸಬಹುದೆಂದು ಬೆನ್ಹದದನ ಜನರು ಅಪೇಕ್ಷೆಪಟ್ಟಿದ್ದರು. ಅಹಾಬನು ಬೆನ್ಹದದನನ್ನು ತನ್ನ ಸೋದರನೆಂದು ಕರೆದಾಗ, ಸಲಹೆಗಾರರು ತ್ವರಿತವಾಗಿ, “ಹೌದು! ಬೆನ್ಹದದನು ನಿನ್ನ ಸೋದರನೇ” ಎಂದರು. ಅಹಾಬನು, “ಅವನನ್ನು ನನ್ನ ಬಳಿಗೆ ಕರೆತನ್ನಿ” ಎಂದನು. ಬೆನ್ಹದದನು ರಾಜನಾದ ಅಹಾಬನ ಬಳಿಗೆ ಬಂದನು. ರಾಜನಾದ ಅಹಾಬನು ಅವನನ್ನು ತನ್ನೊಡನೆ ರಥದಲ್ಲಿ ಕುಳ್ಳಿರಿಸಿಕೊಂಡನು.
IRVKN ಅವರು ಈ ಮಾತು ಶುಭವಚನವೆಂದು ನೆನಸಿ ಕೂಡಲೆ ಅವನ ಮಾತನ್ನೇ ಹಿಡಿದು, “ಬೆನ್ಹದದನು ನಿನ್ನ ಸಹೋದರನೇ ಹೌದು” ಅಂದರು. ಅವನು ಅವರಿಗೆ, “ಹೋಗಿ ಬೆನ್ಹದದನನ್ನು ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಲು ಅವನು ಬಂದಾಗ ಅವನನ್ನು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.