Versions
KNV ನಿನ್ನ ಮನೆಯಲ್ಲಿ ಉಳಿದವರೆಲ್ಲಾ ಬಂದು ಅವನಿಗೆ ಅಡ್ಡ ಬಿದ್ದು ಒಂದು ಬೆಳ್ಳಿ ಹಣವನ್ನೂ ಒಂದು ರೊಟ್ಟಿಯ ಚೂರನ್ನೂ ಬೇಡುತ್ತಾ--ನಾನು ಸ್ವಲ್ಪ ರೊಟ್ಟಿಯನ್ನು ತಿನ್ನುವ ಹಾಗೆ ದಯಮಾಡಿ ನನ್ನನ್ನು ಯಾಜಕ ಸೇವೆ ಯಲ್ಲಿ ಸೇರಿಸಿಕೋ ಎಂದು ಹೇಳುವರು ಅಂದನು.
ERVKN ಆಗ ನಿನ್ನ ಕುಟುಂಬದವರಲ್ಲಿ ಉಳಿದವರೆಲ್ಲ ಬಂದು ಈ ಯಾಜಕನಿಗೆ ಅಡ್ಡಬೀಳುವರು. ಈ ಜನರೆಲ್ಲ ಅವನಲ್ಲಿ ಬಿಡಿಕಾಸನ್ನೂ ರೊಟ್ಟಿಯ ಚೂರನ್ನೂ ಬೇಡುವರು. ಅವರೆಲ್ಲ, “ನಮಗೆ ದೇವಸ್ಥಾನದಲ್ಲಿ ಯಾಜಕನ ಹುದ್ದೆಯನ್ನು ಕೊಡು, ಅದರಿಂದ ಹೊಟ್ಟೆ ತುಂಬಿಸಿಕೊಳ್ಳುತ್ತೇವೆ ಎಂದು ಬೇಡಿಕೊಳ್ಳುವರು”“ ಎಂದನು.
IRVKN ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು § ಬೆಳ್ಳಿ ನಾಣ್ಯ ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು. PE