Versions
KNV ಹಾಗೆಯೇ ಅವನ ಪ್ರಧಾನರು ಜನರಿಗೂ ಯಾಜಕ ರಿಗೂ ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ ಜೆಕರೀಯನೂ ಯೆಹೀಯೇಲನೂ ಪಸ್ಕದ ಬಲಿ ಗೋಸ್ಕರ ಎರಡು ಸಾವಿರದ ಆರು ನೂರು ಮರಿ ಗಳನ್ನೂ ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
ERVKN ಯೋಷೀಯನ ಆಡಳಿತಾಧಿಕಾರಿಗಳೂ ಯಾಜಕರಿಗೆ, ಲೇವಿಯರಿಗೆ ಮತ್ತು ಜನರಿಗೆ ಧಾರಾಳವಾಗಿ ಪಶುಗಳನ್ನು ಕೊಟ್ಟರು. ಮಹಾಯಾಜಕನಾದ ಹಿಲ್ಕೀಯ, ಜೆಕರ್ಯ ಮತ್ತು ಯೆಹೀಯೇಲನು ದೇವಾಲಯದ ಮುಖ್ಯಸ್ತರಾಗಿದ್ದರು. ಅವರು ಯಾಜಕರಿಗೆ ಎರಡು ಸಾವಿರದ ಆರು ನೂರು ಕುರಿಗಳನ್ನು ಮತ್ತು ಆಡುಗಳನ್ನು, ಮೂನ್ನೂರು ಹೋರಿಗಳನ್ನು ಪಸ್ಕಹಬ್ಬದ ಯಜ್ಞಗಳಿಗಾಗಿ ಕೊಟ್ಟರು.