Versions
KNV ತುತೂರಿ ಊದುವವರೂ ಸಂಗೀತಗಾರರೂ ಕರ್ತನನ್ನು ಕೊಂಡಾ ಡುತ್ತಾ ಹೊಗಳುತ್ತಾ ಏಕವಾಗಿ ಒಂದೇ ಶಬ್ದ ಮಾಡಿ ದಾಗ ತುತೂರಿ ತಾಳ ಮೊದಲಾದ ಗೀತ ವಾದ್ಯಗಳಿಂದ ತಮ್ಮ ಶಬ್ದವನ್ನೆತ್ತಿ--ಆತನು ಒಳ್ಳೆಯವನೆಂದೂ ಆತನ ಕೃಪೆಯು ಯುಗಯುಗಕ್ಕೂ ಇರುವದೆಂದೂ ಕರ್ತನನ್ನು ಕೀರ್ತಿಸುವಾಗ ಕರ್ತನ ಆಲಯವು ಮೇಘದಿಂದ ತುಂಬಲ್ಪಟ್ಟಿತು.
ERVKN ಗಾಯಕರ ಸ್ವರವೂ ತುತ್ತೂರಿಗಳ ಶಬ್ದವೂ ಒಬ್ಬನದೆಯೋ ಎಂಬಂತೆ ತೋರಿಬಂತು. ಅವರು ದೇವರನ್ನು ಸ್ತುತಿಸಿ ಕೊಂಡಾಡಿದಾಗ ಒಂದೇ ಶಬ್ದವು ಹೊರಟಿತ್ತು. ಅವರು ತಮ್ಮ ತಾಳ, ತಂತಿವಾದ್ಯಗಳನ್ನು ಗಟ್ಟಿಯಾಗಿ ಬಾರಿಸಿದರು. “ಯೆಹೋವನಿಗೆ ಸ್ತೋತ್ರವಾಗಲಿ; ಆತನು ಒಳ್ಳೆಯವನು; ಆತನ ಪ್ರೀತಿಯು ಶಾಶ್ವತವಾದದ್ದು” ಎಂದು ಗಾಯಕರು ಹಾಡಿದರು. ಆಗ ದೇವಾಲಯವು ಯೆಹೋವನ ತೇಜಸ್ಸಿನಿಂದ ಕೂಡಿದ ಮೋಡದಿಂದ ತುಂಬಿಹೋಯಿತು.
IRVKN ಮಂಜೂಷವನ್ನು ಒಳಗಿಟ್ಟ ಯಾಜಕರು ದೇವಾಲಯದಿಂದ ಹೊರಗೆ ಬಂದಕೂಡಲೆ ಏಕ ಸ್ವರದಿಂದ ಸ್ವರವೆತ್ತಿ ಯೆಹೋವನನ್ನು ಕೀರ್ತಿಸುವುದಕ್ಕಾಗಿ ತುತ್ತೂರಿ ಊದುವವರೂ ಗಾಯನ ಮಾಡುವವರೂ ಅಲ್ಲಿ ನಿಂತಿದ್ದರು. ತುತ್ತೂರಿ, ತಾಳ ಮೊದಲಾದ ವಾದ್ಯಗಳ ಧ್ವನಿಯೊಡನೆ ಹೀಗೆ ಹಾಡಿದರು, “ಯೆಹೋವನು ಒಳ್ಳೆಯವನು, ಆತನ ಕೃಪೆಯು ಶಾಶ್ವತವಾಗಿರುವುದು” ಎಂದು ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡುವವರ ಸ್ವರವೂ ಕೇಳಿಸಿದೊಡನೆ, ಮೇಘವು ಯೆಹೋವನ ಆಲಯದಲ್ಲಿ ತುಂಬಿಕೊಂಡಿತು.