Versions
KNV ಇಸ್ರಾಯೇಲ್ಯರ ಅರಸನು ತನ್ನ ವಸ್ತ್ರಗಳನ್ನು ಹರಿದು ಕೊಂಡನೆಂದು ದೇವರ ಮನುಷ್ಯನಾದ ಎಲೀಷನು ಕೇಳಿದಾಗ--ನೀನು ನಿನ್ನ ವಸ್ತ್ರಗಳನ್ನು ಹರಿದುಕೊಂಡ ದ್ದೇನು? ಇಸ್ರಾಯೇಲಿನಲ್ಲಿ ಪ್ರವಾದಿ ಇದ್ದಾನೆಂದು ಅವನು ತಿಳುಕೊಳ್ಳುವ ಹಾಗೆ ಅವನು ನನ್ನ ಬಳಿಗೆ ಬರಲಿ ಎಂದು ಅರಸನಿಗೆ ಹೇಳಿ ಕಳುಹಿಸಿದನು.
ERVKN ಇಸ್ರೇಲಿನ ರಾಜನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದು ದೇವಮನುಷ್ಯನಾದ ಎಲೀಷನಿಗೆ ತಿಳಿಯಿತು. ಎಲೀಷನು ರಾಜನಿಗೆ ಈ ಸಂದೇಶವನ್ನು ಕಳುಹಿಸಿದನು: “ನೀನು ನಿನ್ನ ಬಟ್ಟೆಗಳನ್ನು ಹರಿದುಕೊಂಡಿದ್ದು ಏಕೆ? ನಾಮಾನನು ನನ್ನ ಬಳಿಗೆ ಬರಲಿ. ಇಸ್ರೇಲಿನಲ್ಲಿ ಒಬ್ಬ ಪ್ರವಾದಿ ಇದ್ದಾನೆಂಬುದು ಅವನಿಗೆ ತಿಳಿಯುತ್ತದೆ!”
IRVKN ಇಸ್ರಾಯೇಲರ ಅರಸನು ತನ್ನ ಬಟ್ಟೆಗಳನ್ನು ಹರಿದುಕೊಂಡನೆಂಬುದನ್ನು ದೇವರ ಮನುಷ್ಯನಾದ ಎಲೀಷನು ಕೇಳಿ ದೂತರ ಮುಖಾಂತರವಾಗಿ ಅವನಿಗೆ, “ನೀನು, ನಿನ್ನ ಬಟ್ಟೆಗಳನ್ನು ಹರಿದುಕೊಂಡದ್ದೇಕೆ? ಅವನನ್ನು ನನ್ನ ಬಳಿಗೆ ಕಳುಹಿಸು, ಇಸ್ರಾಯೇಲರಲ್ಲಿ ಒಬ್ಬ ಪ್ರವಾದಿಯಿದ್ದಾನೆಂಬುದು ಅವನಿಗೆ ಗೊತ್ತಾಗಲಿ” ಎಂದು ಹೇಳಿ ಕಳುಹಿಸಿದನು.