Versions
KNV ಹದದೆಜೆರನ ಸೇವಕರಾದ ಅರಸುಗಳೆ ಲ್ಲರೂ ತಾವು ಇಸ್ರಾಯೇಲ್ಯರ ಮುಂದೆ ಹೊಡೆಯ ಲ್ಪಟ್ಟದ್ದನ್ನು ಕಂಡಾಗ ಅವರು ಇಸ್ರಾಯೇಲ್ಯರ ಸಂಗಡ ಸಮಾಧಾನಮಾಡಿಕೊಂಡು ಅವರನ್ನು ಸೇವಿಸಿದರು.ಹೀಗೆ ಅರಾಮ್ಯರು ಅಮ್ಮೋನನ ಮಕ್ಕಳಿಗೆ ಇನ್ನು ಸಹಾಯಮಾಡುವದಕ್ಕೆ ಭಯಪಟ್ಟರು.
ERVKN ಹದದೆಜೆರನ ಸೇವೆಯಲ್ಲಿದ್ದ ರಾಜರಿಗೆ ಇಸ್ರೇಲರು ತಮ್ಮನ್ನು ಸೋಲಿಸಿದುದು ತಿಳಿದುಬಂತು. ಅದುದರಿಂದ ಅವರು ಇಸ್ರೇಲರೊಂದಿಗೆ ಶಾಂತಿಸಂಧಾನ ಮಾಡಿಕೊಂಡು ಅವರ ಸೇವಕರಾದರು. ಅಂದಿನಿಂದ ಅಮ್ಮೋನಿಯರಿಗೆ ಮತ್ತೆ ಸಹಾಯಮಾಡಲು ಅರಾಮ್ಯರು ಭಯಗೊಂಡರು.
IRVKN ಹದದೆಜೆರನಿಗೆ ದಾಸರಾಗಿದ್ದ ಅರಸರೆಲ್ಲರೂ ಇಸ್ರಾಯೇಲ್ಯರಿಂದ ತಾವು ಸೋತುಹೋದೆವೆಂದು ತಿಳಿದು, ಅವರೊಡನೆ ಒಪ್ಪಂದ ಮಾಡಿಕೊಂಡು, ಅವರಿಗೆ ದಾಸರಾದರು. ಅಂದಿನಿಂದ ಅರಾಮ್ಯರು ಅಮ್ಮೋನಿಯರಿಗೆ ಸಹಾಯಮಾಡುವುದಕ್ಕೆ ಧೈರ್ಯದಿಂದ ಮುಂದೆ ಬರಲಿಲ್ಲ. PE