Versions
KNV ಆದದರಿಂದ ಅವನು ತನ್ನ ಸೇವಕರಿಗೆ--ನೋಡಿರಿ, ನನ್ನ ಹೊಲಕ್ಕೆ ಸವಿಾಪ ವಾಗಿ ಯೋವಾಬನ ಹೊಲವಿದೆ; ಅದರಲ್ಲಿ ಜವೆ ಗೋಧಿ ಅದೆ; ನೀವು ಹೋಗಿ ಅದನ್ನು ಬೆಂಕಿಯಿಂದ ಸುಟ್ಟುಬಿಡಿರಿ ಅಂದನು. ಹಾಗೆಯೇ ಅಬ್ಷಾಲೋಮನ ಸೇವಕರು ಆ ಹೊಲಕ್ಕೆ ಬೆಂಕಿಯನ್ನು ಹಚ್ಚಿದರು.
ERVKN ಆಗ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ನನ್ನ ಹೊಲದ ಪಕ್ಕದಲ್ಲಿ ಯೋವಾಬನ ಹೊಲವಿದೆ. ಅವನು ಆ ಹೊಲದಲ್ಲಿ ಜವೆಗೋಧಿಯನ್ನು ಬೆಳೆದಿದ್ದಾನೆ. ಹೋಗಿ ಆ ಜವೆಗೋಧಿಯನ್ನು ಸುಟ್ಟುಬಿಡಿರಿ” ಎಂದು ಹೇಳಿದನು. ಅಬ್ಷಾಲೋಮನ ಸೇವಕರು ಹೋಗಿ ಯೋವಾಬನ ಹೊಲದಲ್ಲಿ ಬೆಂಕಿಯನ್ನು ಹಚ್ಚಿದರು.
IRVKN ಆದುದರಿಂದ ಅಬ್ಷಾಲೋಮನು ತನ್ನ ಸೇವಕರಿಗೆ, “ನೋಡಿರಿ, ಸಮೀಪದಲ್ಲಿಯೇ ಯೋವಾಬನ ಜವೆಗೋದಿಯ ಹೊಲವುಂಟಲ್ಲಾ, ಹೋಗಿ ಅದಕ್ಕೆ ಬೆಂಕಿ ಹಚ್ಚಿರಿ” ಎಂದು ಆಜ್ಞಾಪಿಸಿದನು. ಅವರು ಹಾಗೆಯೇ ಮಾಡಿದರು.