Versions
KNV ಇಗೋ, ಕಿಡಿಗಳಿಂದ ಆವರಿಸಿಕೊಳ್ಳುವಂತೆ ಬೆಂಕಿ ಯನ್ನು ಹತ್ತಿಸಿಕೊಳ್ಳುವವರೆಲ್ಲರೇ, ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ ನೀವು ಹತ್ತಿಸಿದ ಕಿಡಿಗಳಲ್ಲಿಯೂ ನಡೆಯಿರಿ. ನನ್ನ ಹಸ್ತದಿಂದ ನಿಮಗಾಗುವದು ಇದೇ; ನೀವು ದುಃಖದಲ್ಲಿ ಬಿದ್ದುಕೊಂಡಿರುವಿರಿ.
ERVKN “ಆದರೆ ನೀವು ನಿಮ್ಮ ದಾರಿಯಲ್ಲಿಯೇ ಜೀವಿಸಬೇಕೆಂದಿದ್ದೀರಿ, ನೀವು ನಿಮ್ಮ ಬೆಂಕಿಗಳನ್ನೂ ದೀವಟಿಗೆಗಳನ್ನೂ ಹಚ್ಚುತ್ತೀರಿ, ನಿಮಗೆ ಇಷ್ಟಬಂದ ರೀತಿಯಲ್ಲಿ ಜೀವಿಸುತ್ತೀರಿ. ಆದ್ದರಿಂದ ನೀವು ಶಿಕ್ಷಿಸಲ್ಪಡುವಿರಿ. ನಿಮ್ಮ ಬೆಂಕಿಯಲ್ಲಿಯೂ ದೀವಟಿಗೆಗಳಲ್ಲಿಯೂ ನೀವೇ ಬಿದ್ದು ಸುಟ್ಟುಹೋಗುವಿರಿ. ಇದನ್ನು ನಾನೇ ನೆರವೇರಿಸುವೆನು.”
IRVKN ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ,
ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ.
ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.” PE