Versions
KNV ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
ERVKN ಅಂತರಂಗದಲ್ಲಿ ಯೆಹೂದ್ಯನಾಗಿರುವವನು ಮಾತ್ರ ನಿಜವಾದ ಯೆಹೂದ್ಯನು. ಹೃದಯದಲ್ಲಿ ಆದ ಸುನ್ನತಿಯೇ ನಿಜವಾದ ಸುನ್ನತಿ. ಈ ಸುನ್ನತಿಯಾದದ್ದು ಪವಿತ್ರಾತ್ಮನಿಂದಲೇ ಹೊರತು ಲಿಖಿತ ಧರ್ಮಶಾಸ್ತ್ರದಿಂದಲ್ಲ. ಪವಿತ್ರಾತ್ಮನಿಂದ ಹೃದಯದಲ್ಲಿ ಸುನ್ನತಿ ಹೊಂದಿರುವ ವ್ಯಕ್ತಿಯು ಹೊಗಳಿಕೆಯನ್ನು ಪಡೆಯುವುದು ದೇವರಿಂದಲೇ ಹೊರತು ಮನುಷ್ಯರಿಂದಲ್ಲ.