Versions
KNV ಅವರು ತಮ್ಮ ಮಕ್ಕಳಿಗೆ ಸುನ್ನತಿ ಮಾಡಿಸಬಾರದೆಂದೂ ಆಚಾರಗಳ ಪ್ರಕಾರ ನಡೆಯಬಾರದೆಂದೂ ಹೇಳುತ್ತಾ ಮೋಶೆ ಬರೆದದ್ದನ್ನು ತ್ಯಜಿಸಬೇಕೆಂದು ಅನ್ಯಜನರಲ್ಲಿರುವ ಯೆಹೂದ್ಯರಿಗೆ ನೀನು ಬೋಧಿಸುತ್ತಿದ್ದೀ ಎಂಬದಾಗಿ ನಿನ್ನ ವಿಷಯದಲ್ಲಿ ಅವರು ಕೇಳಿದ್ದಾರೆ.
ERVKN ಈ ಯೆಹೂದ್ಯರು ನಿನ್ನ ಉಪದೇಶದ ಬಗ್ಗೆ ಕೇಳಿದ್ದಾರೆ. ಬೇರೆ ದೇಶಗಳಲ್ಲಿ ಯೆಹೂದ್ಯರಲ್ಲದ ಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರಿಗೆ, “ನೀವು ಮೋಶೆಯ ಧರ್ಮಶಾಸ್ತ್ರವನ್ನು ತ್ಯಜಿಸಿರಿ; ನಿಮ್ಮ ಮಕ್ಕಳಿಗೆ ಸುನ್ನತಿ ಮಾಡಬೇಡಿರಿ ಯೆಹೂದ್ಯರ ಸಂಪ್ರದಾಯಗಳಿಗೆ ವಿಧೇಯರಾಗಬೇಡಿರಿ ಎಂಬುದಾಗಿ ಹೇಳುತ್ತಿರುವಿಯೆಂದು ಅವರು ಕೇಳಿದ್ದಾರೆ.
IRVKN ನೀನು ಅನ್ಯಜನರ ಮಧ್ಯದಲ್ಲಿ ವಾಸವಾಗಿರುವ ಯೆಹೂದ್ಯರೆಲ್ಲರಿಗೆ; ‘ನಿಮ್ಮ ಮಕ್ಕಳಿಗೆ ಸುನ್ನತಿಮಾಡಿಸಬೇಡಿರಿ, ನಿಮ್ಮ ಆಚಾರಗಳನ್ನು ಅನುಸರಿಸಿ ನಡೆಯಬೇಡಿರಿ ಎಂದು ಹೇಳಿ, ಮೋಶೆಯ ಧರ್ಮವನ್ನು ತ್ಯಜಿಸಬೇಕೆಂಬುದಾಗಿ ಬೋಧಿಸುತ್ತಿರುವೆ’ ಎಂದು ನಿನ್ನ ಕುರಿತಾಗಿ ಹೇಳಿದ್ದಾರೆ.