Versions
KNV ಆದರೆ ದಾನಿಯೇಲನು ತಾನು ಅರಸನ ಭೋಜನದ ಪಾಲಿನಿಂದಲಾದರೂ ಅವನು ಕುಡಿಯುವ ದ್ರಾಕ್ಷಾರಸದಿಂದಾದರೂ ತನ್ನನ್ನು ಅಶುದ್ಧಪಡಿಸಿಕೊಳ್ಳುವದಿಲ್ಲವೆಂದು ತನ್ನ ಹೃದಯದಲ್ಲಿ ನಿಶ್ಚಯಿಸಿಕೊಂಡನು; ಆದುದರಿಂದ ತಾನು ಅಶುದ್ಧ ವಾಗದ ಹಾಗೆ ಕಂಚುಕಿಯರ ಯಜಮಾನನ್ನು ಬೇಡಿ ಕೊಂಡನು.
ERVKN ದಾನಿಯೇಲನು ಅರಸನ ಪುಷ್ಟಿದಾಯಕ ಆಹಾರವನ್ನು ಮತ್ತು ಪಾನೀಯವನ್ನು ಇಷ್ಟಪಡಲಿಲ್ಲ. ಆ ಆಹಾರ ಮತ್ತು ಪಾನೀಯಗಳಿಂದ ತನ್ನನ್ನು ಅಶುದ್ಧಗೊಳಿಸಿಕೊಳ್ಳಲು ದಾನಿಯೇಲನಿಗೆ ಇಷ್ಟವಿರಲಿಲ್ಲ. ಆದುದರಿಂದ ಈ ರೀತಿ ತನ್ನನ್ನು ಅಶುದ್ಧಗೊಳಿಸಿಕೊಳ್ಳದೆ ಇರುವದಕ್ಕಾಗಿ ಅಶ್ಪೆನಜನ ಅಪ್ಪಣೆಯನ್ನು ಕೇಳಿದನು.
IRVKN ಆದರೆ ದಾನಿಯೇಲನು ರಾಜನ ಭೋಜನ ಪದಾರ್ಥಗಳನ್ನು ತಿಂದು ರಾಜನು ಕುಡಿಯುವ ದ್ರಾಕ್ಷಾರಸವನ್ನು ಕುಡಿದು ತನ್ನನ್ನು ಅಶುದ್ಧ ಮಾಡಿಕೊಳ್ಳಬಾರದೆಂದು ನಿಶ್ಚಯಿಸಿ ಕಂಚುಕಿಯರ ಅಧ್ಯಕ್ಷನಿಗೆ, “ನಾನು ಅಶುದ್ಧನಾಗಲಾರೆ, ಕ್ಷಮಿಸು” ಎಂದು ವಿಜ್ಞಾಪಿಸಿದನು.