Versions
KNV ಆಮೇಲೆ ಕಬ್ಬಿಣವೂ ಮಣ್ಣೂ ಹಿತ್ತಾಳೆಯೂ ಬೆಳ್ಳಿಯೂ ಮತ್ತು ಬಂಗಾರವೂ ಕೂಡ ಒಡೆದು ಚೂರು ಚೂರಾಗಿ ಬೇಸಿಗೆ ಕಾಲದ ಧಾನ್ಯದ ಹೊಟ್ಟಿನ ಹಾಗಾ ದವು; ಅವುಗಳಿಗೆ ಎಡೆ ಸಿಗದ ಹಾಗೆ ಗಾಳಿಯು ಅವುಗಳನ್ನು ಹೊಡೆದುಕೊಂಡು ಹೋಯಿತು; ಪ್ರತಿಮೆಯನ್ನು ಬಡಿದ ಕಲ್ಲು ದೊಡ್ಡ ಬೆಟ್ಟವಾಗಿ ಸಮಸ್ತ ಭೂಮಿಯನ್ನು ತುಂಬಿಸಿತು.
ERVKN ಆಮೇಲೆ ಕಬ್ಬಿಣ, ಮಣ್ಣು, ಕಂಚು, ಬೆಳ್ಳಿ, ಚಿನ್ನ ಎಲ್ಲವೂ ಏಕಕಾಲಕ್ಕೆ ಒಡೆದು ಚೂರೂಚೂರಾದವು. ಆ ಚೂರುಗಳೆಲ್ಲ ಬೇಸಿಗೆ ಕಾಲದ ಕಣದಲ್ಲಿನ ಹೊಟ್ಟಿನಂತಾದವು. ಗಾಳಿಯು ಆ ಚೂರುಗಳನ್ನು ಹಾರಿಸಿಕೊಂಡು ಹೋಯಿತು. ಅಲ್ಲಿ ಏನೂ ಉಳಿಯಲಿಲ್ಲ. ಹಿಂದೆಂದೂ ಅಲ್ಲೊಂದು ಪ್ರತಿಮೆ ಇತ್ತೆಂದು ಯಾರೂ ಹೇಳುವಂತಿರಲಿಲ್ಲ. ಆಮೇಲೆ ಆ ಪ್ರತಿಮೆಗೆ ಅಪ್ಪಳಿಸಿದ ಬಂಡೆಯು ಒಂದು ದೊಡ್ಡ ಪರ್ವತವಾಗಿ ಇಡೀ ಭೂಮಂಡಲವನ್ನು ವ್ಯಾಪಿಸಿತು.
IRVKN ಆಗ ಕಬ್ಬಿಣ, ಮಣ್ಣು, ತಾಮ್ರ, ಬೆಳ್ಳಿ ಬಂಗಾರಗಳೆಲ್ಲವೂ ಪುಡಿಪುಡಿಯಾಗಿ ಸುಗ್ಗಿಯ ಕಣಗಳ ಹೊಟ್ಟಿನಂತಾದವು; ಗಾಳಿಯು ತೂರಿಕೊಂಡು ಹೋಗಲು ಅವುಗಳಿಗೆ ನೆಲೆಯೇ ಇಲ್ಲವಾಯಿತು; ಪ್ರತಿಮೆಗೆ ಬಡಿದ ಆ ಬಂಡೆಯು ಮಹಾ ಪರ್ವತವಾಗಿ ಲೋಕದಲ್ಲೆಲ್ಲಾ ತುಂಬಿಕೊಂಡಿತು. PEPS