Versions
KNV ಅದರ ಎಲೆಗಳು ಅಂದವಾಗಿದ್ದವು, ಅದರ ಫಲವು ಬಹಳವಾಗಿತ್ತು; ಅದರಲ್ಲಿ ಎಲ್ಲರಿಗೂ ಆಹಾರವಿತ್ತು; ಬಯಲು ಮೃಗಗಳಿಗೆ ಅದರ ಕೆಳಗೆ ನೆರಳಿತ್ತು; ಆಕಾಶದ ಪಕ್ಷಿಗಳು ಅದರ ಕೊಂಬೆಗಳಲ್ಲಿ ವಾಸಿಸುತ್ತಿದ್ದವು, ಎಲ್ಲಾ ಜೀವಿಗಳಿಗೂ ಅದರಿಂದಲೇ ಆಹಾರ ಇರುತ್ತಿತ್ತು.
ERVKN ಆ ಮರದ ಎಲೆಗಳು ಸುಂದರವಾಗಿದ್ದವು. ಅದು ತುಂಬ ಒಳ್ಳೆಯ ಹಣ್ಣುಗಳನ್ನು ಫಲಿಸಿತ್ತು. ಆ ಮರದಲ್ಲಿ ಪ್ರತಿಯೊಬ್ಬರಿಗೂ ಸಾಕಾಗುವಷ್ಟು ಆಹಾರವಿತ್ತು. ಕಾಡುಪ್ರಾಣಿಗಳೂ ಆ ಮರದ ಕೆಳಗೆ ಆಶ್ರಯವನ್ನು ಪಡೆದಿದ್ದವು. ಅದರ ಕೊಂಬೆಗಳಲ್ಲಿ ಪಕ್ಷಿಗಳು ವಾಸಮಾಡಿಕೊಂಡಿದ್ದವು. ಪ್ರತಿಯೊಂದು ಪ್ರಾಣಿಗೂ ಆ ಮರದಿಂದ ಆಹಾರ ಸಿಕ್ಕುತ್ತಿತ್ತು.
IRVKN ಅದರ ಎಲೆಗಳು ಅಂದ, ಹಣ್ಣುಗಳು ಬಹಳ, ಆದ್ದರಿಂದ ಎಲ್ಲಕ್ಕೂ ಆಹಾರ, ನೆರಳೂ, ಭೂಜಂತುಗಳಿಗೆ ಆಶ್ರಯ, ಕೊಂಬೆಗಳು ಆಕಾಶ ಪಕ್ಷಿಗಳಿಗೆ ನೆಲೆ, ಅದು ಸಕಲ ಜೀವಿಗಳಿಗೂ ಜೀವನ.