Versions
KNV ನಿಮ್ಮನ್ನೇ ಕರ್ತನು ತಕ್ಕೊಂಡು ನೀವು ಈ ದಿನ ಇರುವ ಪ್ರಕಾರ ತನಗೆ ಸ್ವಾಸ್ತ್ಯವಾದ ಜನವಾಗುವ ಹಾಗೆ ಕಬ್ಬಿಣದ ಕುಲುಮೆಯೊಳಗಿಂದ ಅಂದರೆ ಐಗುಪ್ತದಿಂದ ಹೊರಗೆ ಬರಮಾಡಿದ್ದಾನೆ.
ERVKN ಆದರೆ ಯೆಹೋವನು ನಿಮ್ಮನ್ನು ಈಜಿಪ್ಟ್ ದೇಶದಿಂದ ಹೊರತಂದು ತನ್ನ ಸ್ವಕೀಯ ಪ್ರಜೆಯನ್ನಾಗಿ ಮಾಡಿಕೊಂಡಿರುತ್ತಾನೆ. ಕಬ್ಬಿಣವನ್ನು ಕರಗಿಸುವ ಬೆಂಕಿಯ ಕುಲುಮೆಯಂತಿದ್ದ ಈಜಿಪ್ಟಿನಿಂದ ನಿಮ್ಮನ್ನು ಎಳೆದು ತಂದು ತನ್ನ ವಿಶೇಷ ಜನಾಂಗವಾಗಿ ನಿಮ್ಮನ್ನು ತೆಗೆದುಕೊಂಡಿರುತ್ತಾನೆ. ಈಗ ನೀವು ಆತನ ಜನರಾಗಿದ್ದೀರಿ.