Versions
KNV ಆಗ ಮೋಶೆಯು ಕರ್ತನಿಗೆ--ನೋಡು, ನೀನು ಜನರನ್ನು ಕರೆದುಕೊಂಡು ಹೋಗು ಎಂದು ನನಗೆ ಹೇಳಿದ್ದೀ ಯಾರನ್ನು ನನ್ನ ಸಂಗಡ ಕಳುಹಿಸುವಿ ಎಂದು ನೀನು ನನಗೆ ತಿಳಿಸಲಿಲ್ಲ. ಆದಾಗ್ಯೂ ನೀನು--ನಾನು ನಿನ್ನ ಹೆಸರಿನ ಮೂಲಕ ನಿನ್ನನ್ನು ತಿಳಿದಿದ್ದೇನೆ, ನನ್ನ ದೃಷ್ಟಿಯಲ್ಲಿ ನಿನಗೆ ಕೃಪೆ ದೊರೆ ಯಿತು ಎಂದು ಹೇಳಿದ್ದೀಯಲ್ಲಾ.
ERVKN ಮೋಶೆಯು ಯೆಹೋವನಿಗೆ, “ಈ ಜನರನ್ನು ಮುನ್ನಡೆಸಬೇಕೆಂದು ನೀನು ನನಗೆ ಹೇಳಿರುವೆ. ಆದರೆ ನನ್ನೊಂದಿಗೆ ಯಾರನ್ನು ಕಳುಹಿಸುತ್ತೀಯೆಂದು ನೀನು ಹೇಳಲಿಲ್ಲ. ನೀನು ನನಗೆ, ‘ನಾನು ನಿನ್ನನ್ನು ಚೆನ್ನಾಗಿ ಬಲ್ಲೆನು. ನಾನು ನಿನ್ನನ್ನು ಮೆಚ್ಚಿದ್ದೇನೆ’ ಎಂದು ಹೇಳಿದೆ.