Versions
KNV ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ.
ERVKN ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, “ನಾನು ಎದ್ದುನಿಂತು ಅವರಿಗೆ ವಿರುದ್ಧವಾಗಿ ಹೋರಾಡುವೆನು. ನಾನು ಹೆಸರುವಾಸಿಯಾದ ಬಾಬಿಲೋನ್ ನಗರವನ್ನು ನಾಶಮಾಡುವೆನು. ಬಾಬಿಲೋನಿನ ಎಲ್ಲಾ ಜನರನ್ನು ನಾಶಮಾಡುವೆನು. ಅವರ ಮಕ್ಕಳನ್ನು ಮತ್ತು ಮರಿಮಕ್ಕಳನ್ನು ನಾಶಮಾಡುವೆನು” ಯೆಹೋವನೇ ಈ ಮಾತುಗಳನ್ನು ನುಡಿದಿದ್ದಾನೆ.
IRVKN “ನಾನು ಅವರ ವಿರುದ್ಧವಾಗಿ ಏಳುತ್ತೇನೆ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
“ನಾನು ಬಾಬೆಲಿನಿಂದ ಹೆಸರನ್ನೂ, ಉಳಿದ ಜನರನ್ನೂ, ಆಕೆಯ ಸಂತತಿಯನ್ನೂ ನಿರ್ಮೂಲ ಮಾಡುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.