Versions
KNV ಆಗ ಬೂಜ್ನಾದ ಬರಕೇಲನ ಮಗನಾದ ಎಲೀಹು ಉತ್ತರಕೊಟ್ಟು ಹೇಳಿದ್ದೇನೆಂದರೆ--ನಾನು ಒಳ್ಳೇಪ್ರಾಯದವನು, ನೀವು ನೆರೆಯವರು; ಆದದ ರಿಂದ ನಾನು ಹೆದರಿ ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸುವದಕ್ಕೆ ಭಯಪಟ್ಟೆನು.
ERVKN ಆದ್ದರಿಂದ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಎಲೀಹು ಮಾತಾಡಲಾರಂಭಿಸಿ ಹೀಗೆಂದನು: “ನಾನು ವಯಸ್ಸಿನಲ್ಲಿ ಚಿಕ್ಕವನು. ನೀವು ವೃದ್ಧರು. ಆದಕಾರಣ, ನನ್ನ ಅಭಿಪ್ರಾಯವನ್ನು ನಿಮಗೆ ತಿಳಿಸಲು ಹಿಂಜರಿದೆನು ಮತ್ತು ಹೆದರಿಕೊಂಡಿದ್ದೆನು.
IRVKN ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು, “ನಾನು ಯೌವನಸ್ಥನು, ನೀವು ನನಗಿಂತ ಹಿರಿಯರು;
ಆದುದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆಮಾಡಲು ಹೆದರಿದೆನು.”