Versions
KNV ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು.
ERVKN ಯೆಹೋವನು ಯೋಬನ ಜೀವಿತದ ಅಂತಿಮ ಸ್ಥಿತಿಯನ್ನು ಮೊದಲನೆ ಸ್ಥಿತಿಗಿಂತಲೂ ಹೆಚ್ಚಾಗಿ ಆಶೀರ್ವದಿಸಿದನು. ಯೋಬನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರುಸಾವಿರ ಒಂಟೆಗಳೂ ಒಂದುಸಾವಿರ ಜೊತೆ ಎತ್ತುಗಳೂ ಒಂದುಸಾವಿರ ಹೆಣ್ಣು ಕತ್ತೆಗಳೂ ಇದ್ದವು.