Bible Versions
Bible Books

Judges 7 (YLT) Young's Literal Translation

Versions

KNV   ಗಿದ್ಯೋನನೆಂಬ ಯೆರುಬ್ಬಾಳನೂ ಅವನ ಸಂಗಡ ಇದ್ದ ಜನರೆಲ್ಲರೂ ಉದಯದಲ್ಲಿ ಎದ್ದು ಹರೋದಿನ ಬಾವಿಯ ಬಳಿಯಲ್ಲಿ ದಂಡಿಳಿದರು. ಮಿದ್ಯಾನ್ಯರ ದಂಡು ಅವರಿಗೆ ಉತ್ತರಕ್ಕೆ ಮೋರೆ ಬೆಟ್ಟದ ತಗ್ಗಿನಲ್ಲಿ ಇಳಿದಿತ್ತು.
ERVKN   ಬೆಳಗಿನ ಜಾವ ಯೆರುಬ್ಬಾಳನು (ಗಿದ್ಯೋನನು) ಮತ್ತು ಅವನ ಎಲ್ಲಾ ಜನರು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಪಾಳೆಯ ಮಾಡಿಕೊಂಡರು. ಮಿದ್ಯಾನ್ಯರು ಮೋರೆ ಎಂಬ ಬೆಟ್ಟದ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡರು. ಇದು ಗಿದ್ಯೋನ ಮತ್ತು ಅವನ ಜನರ ಉತ್ತರಕ್ಕಿತ್ತು.
IRVKN   {ಗಿದ್ಯೋನನು ಮಿದ್ಯಾನ್ಯರನ್ನು ಸೋಲಿಸಿದ್ದು} PS ಆನಂತರ ಯೆರುಬ್ಬಾಳನೆನಿಸಿಕೊಳ್ಳುವ ಗಿದ್ಯೋನನೂ, ಅವನ ಸಂಗಡ ಇದ್ದ ಜನರೂ ಬೆಳಿಗ್ಗೆ ಎದ್ದು ಹೊರಟು ಹೋಗಿ ಹರೋದಿನ ಬುಗ್ಗೆಯ ಬಳಿಯಲ್ಲಿ ಬಿಡಾರ ಹಾಕಿಕೊಂಡರು. ಇವರ ಉತ್ತರದಿಕ್ಕಿನಲ್ಲಿ ಮೋರೆಗುಡ್ಡದ ಹಿಂದಿನ ತಗ್ಗಿನಲ್ಲಿ ಮಿದ್ಯಾನ್ಯರ ದಂಡಿಳಿದಿತ್ತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us