Versions
KNV ಅವರು ಬೀದಿಗಳಲ್ಲಿ ಕುರುಡರಂತೆ ಅಲೆದಾಡಿದರು, ಅವರು ರಕ್ತದಿಂದ ತಮ್ಮನ್ನು ತಾವೇ ಅಪವಿತ್ರಪಡಿಸಿ ಕೊಂಡರು; ಆದದರಿಂದ ಮನುಷ್ಯರು ಅವರ ವಸ್ತ್ರಗಳನ್ನು ಮುಟ್ಟಲಾರದೆ ಹೋದರು.
ERVKN ಆದ್ದರಿಂದ ಆ ಪ್ರವಾದಿಗಳು ಮತ್ತು ಯಾಜಕರು ಕುರುಡರಂತೆ ಬೀದಿಗಳಲ್ಲಿ ಅಲೆದಾಡಿದರು. ಅವರು ರಕ್ತದಿಂದ ಹೊಲಸಾಗಿದ್ದರು. ಅವರು ಹೊಲಸಾಗಿದ್ದದರಿಂದ ಅವರ ಬಟ್ಟೆಯನ್ನು ಮುಟ್ಟುವುದಕ್ಕೂ ಯಾರಿಗೂ ಸಾಧ್ಯವಿರಲಿಲ್ಲ.
IRVKN ಆಹಾ, ಆ ಯಾಜಕ ಮತ್ತು ಪ್ರವಾದಿಗಳು ಕುರುಡರಂತೆ ಬೀದಿಗಳಲ್ಲಿ ಅಲೆಯುತ್ತಾರೆ; ರಕ್ತದಿಂದ ಹೊಲಸಾಗಿ ಹೋಗಿದ್ದಾರೆ,
ಅವರ ಬಟ್ಟೆಯನ್ನು ಯಾರೂ ಮುಟ್ಟರು.