Versions
KNV ವ್ಯಭಿಚಾರಿ ಯಾದ ಈ ಕೆಟ್ಟ ಸಂತತಿಯು ಸೂಚಕಕಾರ್ಯವನ್ನು ಹುಡುಕುತ್ತದೆ; ಆದರೆ ಪ್ರವಾದಿಯಾದ ಯೋನನಲ್ಲಿ ಆದ ಸೂಚಕಕಾರ್ಯವೇ ಹೊರತು ಬೇರೆ ಯಾವ ಸೂಚಕಕಾರ್ಯವೂ ಇದಕ್ಕೆ ಕೊಡಲ್ಪಡುವದಿಲ್ಲ ಎಂದು ಹೇಳಿದನು. ತರುವಾಯ ಆತನು ಅವರನ್ನು ಬಿಟ್ಟು ಹೊರಟುಹೋದನು.
ERVKN ಕೆಟ್ಟವರಾದ ಮತ್ತು ಪಾಪಿಗಳಾದ ಜನರು ಸೂಚನೆಗಾಗಿ ಒಂದು ಅದ್ಭುತಕಾರ್ಯವನ್ನು ಅಪೇಕ್ಷಿಸುತ್ತಾರೆ. ಅವರಿಗೆ ಯೋನನಲ್ಲಾದ ಸೂಚಕಕಾರ್ಯವೊಂದೇ ಹೊರತು ಬೇರೆ ಯಾವ ಸೂಚಕಕಾರ್ಯವೂ ದೊರೆಯುವುದಿಲ್ಲ” ಎಂದು ಉತ್ತರಕೊಟ್ಟನು. ಬಳಿಕ ಯೇಸು ಆ ಸ್ಥಳವನ್ನು ಬಿಟ್ಟು ಹೊರಟು ಹೋದನು.
IRVKN † ಅಂದರೆ ದೇವದ್ರೋಹಿಯಾದ. ವ್ಯಭಿಚಾರಿಣಿಯಂತಿರುವ ಈ ದುಷ್ಟ ಸಂತತಿಯು ಸೂಚಕಕಾರ್ಯವನ್ನು ನೋಡಬೇಕೆಂದು ಹುಡುಕುತ್ತದೆ. ಆದರೆ ಯೋನನ ಸೂಚಕಕಾರ್ಯವೇ ಹೊರತು ಬೇರೆ ಯಾವುದೂ ಇದಕ್ಕೆ ಸಿಕ್ಕುವುದಿಲ್ಲ” ಎಂದು ಉತ್ತರ ಕೊಟ್ಟನು. ತರುವಾಯ ಆತನು ಅವರನ್ನು ಬಿಟ್ಟು ಹೊರಟು ಹೋದನು. PS