Versions
KNV ಆ ದಿನದಲ್ಲಿ ಕರ್ತನು--ನಾನು ಕುದುರೆಗಳನ್ನೆಲ್ಲಾ ಬೆದರಿಕೆಯಿಂದಲೂ ಹತ್ತಿ ದವನನ್ನು ಹುಚ್ಚುತನದಿಂದಲೂ ಹೊಡೆಯುವೆನು; ಯೆಹೂದನ ಮನೆಯ ಮೇಲೆ ನನ್ನ ಕಣ್ಣುಗಳನ್ನು ತೆರೆಯುವೆನು; ಜನಗಳ ಕುದುರೆಗಳನ್ನೆಲ್ಲಾ ಕುರುಡುತನ ದಿಂದ ಹೊಡೆಯುವೆನು.
ERVKN ಆದರೆ ಆ ಸಮಯದಲ್ಲಿ ನಾನು ಅವರ ಕುದುರೆಗಳನ್ನು ಬೆಚ್ಚಿ ಬೀಳುವಂತೆ ಮಾಡುವೆನು. ಅದರ ಸವಾರನು ಭಯಗೊಳ್ಳುವನು. ಶತ್ರುವಿನ ಎಲ್ಲಾ ಕುದುರೆಗಳನ್ನು ನಾನು ಕುರುಡು ಮಾಡುವೆನು. ಆದರೆ ನಾನು ಕಣ್ಣು ತೆರೆದು ಯೆಹೂದ ವಂಶವನ್ನು ಸಂರಕ್ಷಿಸುವೆನು.
IRVKN ಯೆಹೋವನು ಇಂತೆನ್ನುತ್ತಾನೆ, “ಆ ದಿನದಲ್ಲಿ ನಾನು ಎಲ್ಲಾ ಕುದುರೆಗಳು ಭಯದಿಂದ ತಬ್ಬಿಬ್ಬಾಗುವಂತೆ ಮಾಡುವೆನು, ಸವಾರರನ್ನು ಭ್ರಮೆಗೊಳಿಸುವೆನು; ಯೆಹೂದ ವಂಶವನ್ನು ಕಟಾಕ್ಷಿಸಿ ಜನಾಂಗಗಳ ಅಶ್ವಗಳನ್ನೆಲ್ಲಾ ಕುರುಡು ಮಾಡುವೆನು.