Bible Versions
Bible Books

2 Corinthians 4 (ERVKN) Easy to Read Version - Kannadam

1 ದೇವರು ತನ್ನ ಕೃಪೆಯಿಂದ ಸೇವೆಯನ್ನು ನಮಗೆ ಒಪ್ಪಿಸಿದ್ದಾನೆ. ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ.
2 ರಹಸ್ಯವಾದ ಮತ್ತು ನಾಚಿಕೆಕರವಾದ ಮಾರ್ಗಗಳಿಗೆ ನಾವು ವಿಮುಖರಾಗಿದ್ದೇವೆ. ನಾವು ಕುತಂತ್ರವನ್ನು ಉಪಯೋಗಿಸುವುದೂ ಇಲ್ಲ, ದೇವರ ಉಪದೇಶವನ್ನು ಬದಲಾಯಿಸುವುದೂ ಇಲ್ಲ. ನಾವು ಸತ್ಯವನ್ನು ಸ್ಪಷ್ಟವಾಗಿ ಬೋಧಿಸುತ್ತೇವೆ. ನಾವು ಯಾರೆಂಬುದನ್ನು ಜನರಿಗೆ ರೀತಿ ತೋರಿಸಿಕೊಡುತ್ತೇವೆ. ಹೀಗೆ ನಾವು ದೇವರ ಸಮ್ಮುಖದಲ್ಲಿ ಎಂಥಾ ಜನರಾಗಿದ್ದೇವೆ ಎಂಬುದನ್ನು ಅವರು ತಮ್ಮ ಹೃದಯಗಳಲ್ಲಿ ತಿಳಿದುಕೊಳ್ಳಬಲ್ಲರು.
3 ನಾವು ಬೋಧಿಸುವ ಸುವಾರ್ತೆಯು ಮರೆಯಾಗಿರಬಹುದು. ಆದರೆ ನಾಶನದ ಮಾರ್ಗದಲ್ಲಿರುವವರಿಗೆ ಮಾತ್ರ ಅದು ಮರೆಯಾಗಿದೆ.
4 ಲೋಕದ ಅಧಿಪತಿಯು (ಸೈತಾನನು) ನಂಬದವರ ಮನಸ್ಸುಗಳನ್ನು ಕುರುಡುಗೊಳಿಸಿದ್ದಾನೆ. ಕ್ರಿಸ್ತನ ಮಹಿಮೆಯ ವಿಷಯವಾದ ಸುವಾರ್ತೆಯ ಬೆಳಕನ್ನು (ಸತ್ಯವನ್ನು) ಅವರು ಕಾಣಲಾರರು. ಕ್ರಿಸ್ತನೊಬ್ಬನೇ ದೇವರಿಗೆ ಪ್ರತಿರೂಪವಾಗಿದ್ದಾನೆ.
5 ನಾವು ನಮ್ಮ ಬಗ್ಗೆ ಬೋಧಿಸುವುದಿಲ್ಲ. ಆದರೆ ಯೇಸು ಕ್ರಿಸ್ತನೇ ಪ್ರಭುವೆಂದು ಮತ್ತು ಯೇಸುವಿಗೋಸ್ಕರ ನಿಮ್ಮ ಸೇವಕರಾಗಿದ್ದೇವೆಂದು ಬೋಧಿಸುತ್ತೇವೆ.
6 ”ಬೆಳಕು ಕತ್ತಲೆಯೊಳಗಿಂದ ಪ್ರಕಾಶಿಸಲಿ!” ಎಂದು ದೇವರು ಒಮ್ಮೆ ಹೇಳಿದ್ದಾನೆ. ದೇವರೇ ನಮ್ಮ ಹೃದಯಗಳಲ್ಲಿ ತನ್ನ ಬೆಳಕನ್ನು ಬೆಳಗಿಸಿದ್ದಾನೆ. ಕ್ರಿಸ್ತನ ಮುಖದಲ್ಲಿರುವ ದೇವರ ಮಹಿಮೆಯನ್ನು ನಮಗೆ ತಿಳಿಯಪಡಿಸುವುದರ ಮೂಲಕ ಆತನು ನಮಗೆ ಬೆಳಕನ್ನು ಕೊಟ್ಟಿದ್ದಾನೆ.
7 ನಮಗೆ ನಿಕ್ಷೇಪವು ದೇವರಿಂದ ದೊರೆತಿದೆ. ನಾವಾದರೊ ನಿಕ್ಷೇಪವನ್ನು ತುಂಬಿ ಕೊಂಡಿರುವ ಕೇವಲ ಮಡಕೆಗಳಂತಿದ್ದೇವೆ. ಮಹಾಶಕ್ತಿಯು ಬಂದದ್ದು ದೇವರಿಂದಲೇ ಹೊರತು ನಮ್ಮಿಂದಲ್ಲವೆಂಬುದನ್ನು ಇದು ತೋರಿಸುತ್ತದೆ.
8 ನಮ್ಮ ಸುತ್ತಮುತ್ತಲೆಲ್ಲಾ ಇಕ್ಕಟ್ಟುಗಳಿವೆ, ಆದರೆ ಸೋತುಹೋಗಿಲ್ಲ. ಅನೇಕಸಲ, ಏನು ಮಾಡಬೇಕೊ ನಮಗೆ ತಿಳಿಯದು, ಆದರೂ ನಾವು ಧೈರ್ಯಗೆಡುವುದಿಲ್ಲ.
9 ನಾವು ಹಿಂಸೆಗೆ ಗುರಿಯಾದೆವು, ಆದರೆ ದೇವರು ನಮ್ಮನ್ನು ತೊರೆದುಬಿಡಲಿಲ್ಲ. ಕೆಲವು ಸಲ ನಮಗೆ ನೋವಾಯಿತು, ಆದರೂ ನಾಶವಾಗಲಿಲ್ಲ.
10 ನಮ್ಮ ದೇಹಗಳಲ್ಲಿ ಯೇಸುವಿನ ಜೀವವು ತೋರಿಬರಲೆಂದು ಆತನ ಮರಣಾವಸ್ಥೆಯನ್ನು ಅನುಭವಿಸುತ್ತಿದ್ದೇವೆ.
11 ನಾವು ಜೀವಂತವಾಗಿದ್ದರೂ ಯೇಸುವಿಗೋಸ್ಕರ ಯಾವಾಗಲೂ ಮರಣದ ಅಪಾಯದಲ್ಲಿದ್ದೇವೆ. ಸತ್ತುಹೋಗುವ ನಮ್ಮ ದೇಹಗಳಲ್ಲಿ ಆತನ ಜೀವವು ಕಾಣಬರಲೆಂದು ಇದು ನಮಗೆ ಸಂಭವಿಸುತ್ತದೆ.
12 ಆದ್ದರಿಂದ ಮರಣವು ನಮ್ಮಲ್ಲಿ ಕಾರ್ಯಮಾಡುತ್ತಿದೆ, ಆದರೆ ನಿಮ್ಮಲ್ಲಿ ಜೀವವು ಕಾರ್ಯಮಾಡುತ್ತಿದೆ.
13 ”ನಾನು ನಂಬಿದ್ದರಿಂದಲೇ ಮಾತಾಡಿದೆನು.” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ. ನಮ್ಮ ನಂಬಿಕೆಯು ಸಹ ಅದೇ ರೀತಿಯಲ್ಲಿದೆ. ನಾವು ನಂಬುವುದರಿಂದಲೇ ಮಾತಾಡುತ್ತೇವೆ.
14 ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರು ನಮ್ಮನ್ನು ಸಹ ಕ್ರಿಸ್ತನೊಂದಿಗೆ ಎಬ್ಬಿಸುತ್ತಾನೆ ಎಂಬುದು ನಮಗೆ ಗೊತ್ತಿದೆ. ದೇವರು ನಮ್ಮನ್ನು ನಿಮ್ಮ ಜೊತೆಯಲ್ಲಿ ತನ್ನ ಮುಂದೆ ನಿಲ್ಲಿಸುವನು.
15 ಇವುಗಳೆಲ್ಲ ನಿಮಗೋಸ್ಕರವಾಗಿಯೇ. ಹೀಗೆ ದೇವರ ಕೃಪೆಯು ಹೆಚ್ಚುಹೆಚ್ಚು ಜನರಿಗೆ ಕೊಡಲ್ಪಡುವುದು. ಇದರಿಂದಾಗಿ, ಹೆಚ್ಚುಹೆಚ್ಚು ಜನರು ದೇವರ ಮಹಿಮೆಗಾಗಿ ಕೃತಜ್ಞತಾಸುತ್ತಿ ಸಲ್ಲಿಸುವರು.
16 ಆದಕಾರಣವೇ, ನಾವೆಂದಿಗೂ ಬಲಹೀನರಾಗುವುದಿಲ್ಲ. ನಮ್ಮ ಭೌತಿಕ ದೇಹಕ್ಕೆ ವಯಸ್ಸಾಗುತ್ತಿದೆ ಮತ್ತು ಅದು ಬಲಹೀನವಾಗುತ್ತಿದೆ. ಆದರೆ ನಮ್ಮ ಆಂತರ್ಯವು ಪ್ರತಿದಿನ ಹೊಸದಾಗುತ್ತಿದೆ.
17 ಸ್ವಲ್ಪಕಾಲದವರೆಗೆ ನಮಗೆ ಚಿಕ್ಕಪುಟ್ಟ ಇಕ್ಕಟ್ಟುಗಳಿರುತ್ತವೆ. ಆದರೆ ನಿತ್ಯವಾದ ಮಹಿಮೆಯನ್ನು ಹೊಂದಿಕೊಳ್ಳಲು ಅವು ನಮಗೆ ಸಹಾಯಕವಾಗಿವೆ. ಮಹಿಮೆಯು ಇಂದಿನ ಇಕ್ಕಟ್ಟುಗಳಿಗಿಂತಲೂ ಮಹತ್ವವುಳ್ಳದ್ದಾಗಿದೆ.
18 ಆದ್ದರಿಂದ ನಮಗೆ ಕಾಣುವಂಥವುಗಳ ಬಗ್ಗೆ ಯೋಚಿಸದೆ ನಮಗೆ ಕಾಣದಿರುವಂಥವುಗಳ ಬಗ್ಗೆ ಯೋಚಿಸುತ್ತೇವೆ. ನಮಗೆ ಕಾಣುವಂಥವುಗಳು ಕೇವಲ ಸ್ವಲ್ಪಕಾಲ ಮಾತ್ರ ಇರುತ್ತವೆ. ಆದರೆ ನಮಗೆ ಕಾಣದಂಥವುಗಳು ಎಂದೆಂದಿಗೂ ಇರುತ್ತವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×