Bible Versions
Bible Books

Genesis 36 (ERVKN) Easy to Read Version - Kannadam

1 ಎದೋಮನೆಂಬ ಏಸಾವನ ಕುಟುಂಬ ಚರಿತ್ರೆ:
2 ಏಸಾವನು ಕಾನಾನ್ ದೇಶದ ಸ್ತ್ರೀಯರನ್ನು ಮದುವೆಯಾದನು. ಏಸಾವನ ಹೆಂಡತಿಯರು: ಹಿತ್ತಿಯನಾದ ಏಲೋನನ ಮಗಳಾದ ಆದಾ; ಹಿವ್ವಿಯನಾದ ಸಿಬೆಯೋನನಿಗೆ ಹುಟ್ಟಿದ ಅನಾಹ ಎಂಬಾಕೆಯ ಮಗಳಾಗಿದ್ದ ಒಹೊಲೀಬಾಮ;
3 ಇಷ್ಮಾಯೇಲನ ಮಗಳೂ ನೆಬಾಯೋತನ ತಂಗಿಯೂ ಆಗಿದ್ದ ಬಾಸೆಮತ್.
4 ಏಸಾವನಿಗೆ ಮತ್ತು ಆದಾಳಿಗೆ ಎಲೀಫಜನೆಂಬ ಮಗನಿದ್ದನು. ಬಾಸೆಮತಳಿಗೆ ರೆಗೂವೇಲನೆಂಬ ಮಗನಿದ್ದನು.
5 ಒಹೊಲೀಬಾಮಳಿಗೆ ಮೂವರು ಗಂಡುಮಕ್ಕಳಿದ್ದರು: ಯೆಗೂಷ, ಯಳಾಮ ಮತ್ತು ಕೋರಹ. ಇವರೆಲ್ಲರೂ ಏಸಾವನ ಗಂಡುಮಕ್ಕಳು ಮತ್ತು ಕಾನಾನ್ ದೇಶದಲ್ಲಿ ಹುಟ್ಟಿದವರು.
6 This verse may not be a part of this translation
7 This verse may not be a part of this translation
8 This verse may not be a part of this translation
9 ಏಸಾವನು ಎದೋಮ್ ಜನರ ತಂದೆ. ಸೇಯೀರ್ ದೇಶದಲ್ಲಿ ವಾಸವಾಗಿದ್ದ ಏಸಾವನ ಕುಟುಂಬದವರ ಹೆಸರುಗಳು:
10 ಏಸಾವನ ಗಂಡುಮಕ್ಕಳು: ಎಲೀಫಜ, ಇವನು ಏಸಾವನಿಗೆ ಆದಾ ಎಂಬಾಕೆಯಲ್ಲಿ ಹುಟ್ಟಿದ ಮಗನು. ರೆಗೂವೇಲ, ಇವನು ಏಸಾವನಿಗೆ ಬಾಸೆಮತಳಲ್ಲಿ ಹುಟ್ಟಿದ ಮಗನು.
11 ಎಲೀಫಜನಿಗೆ ಐದು ಮಂದಿ ಗಂಡುಮಕ್ಕಳಿದ್ದರು: ತೇಮಾನ್, ಓಮಾರ್, ಚೆಪೋ, ಗತಾಮ್ ಮತ್ತು ಕೆನಜ್.
12 ಎಲೀಫಜನಿಗೆ ತಿಮ್ನ ಎಂಬ ಒಬ್ಬ ದಾಸಿಯೂ ಇದ್ದಳು. ತಿಮ್ನಳಿಗೆ ಮತ್ತು ಎಲೀಫಜನಿಗೆ ಅಮಾಲೇಕ ಎಂಬ ಒಬ್ಬ ಗಂಡುಮಗನಿದ್ದನು.
13 ರೆಗೂವೇಲನಿಗೆ ನಾಲ್ಕು ಮಂದಿ ಗಂಡುಮಕ್ಕಳಿದ್ದರು: ನಹತ್, ಜೆರಹ, ಶಮ್ಮಾ ಮತ್ತು ಮಿಜ್ಜಾ. ಇವರು ಏಸಾವನ ಮೊಮ್ಮಕ್ಕಳು. ಇವರು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
14 ಏಸಾವನ ಮೂರನೆ ಹೆಂಡತಿಯು ಅನಾಹನ ಮಗಳಾದ ಒಹೊಲೀಬಾಮ; (ಅನಾಹನು ಸಿಬೆಯೋನನ ಮಗನು.) ಏಸಾವನ ಮತ್ತು ಒಹೊಲೀಬಾಮಳ ಮಕ್ಕಳು: ಯೆಗೂಷ್, ಯಳಾಮ್ ಮತ್ತು ಕೋರಹ.
15 ಏಸಾವನ ವಂಶಸ್ಥರ ಕುಲಪತಿಗಳು: ಏಸಾವನ ಮೊದಲನೆ ಮಗನಾದ ಎಲೀಫಜ. ಎಲೀಫಜನಿಂದ ಬಂದವರು: ತೇಮಾನ್, ಓಮಾರ್, ಚೆಫೋ, ಕೆನೆಜ್,
16 ಕೋರಹ, ಗತಾಮ ಮತ್ತು ಅಮಾಲೇಕ. ಕುಲಪತಿಗಳು ಏಸಾವನ ಹೆಂಡತಿಯಾದ ಆದಾಳ ಸಂತತಿಯವರು.
17 ಏಸಾವನ ಮಗನಾದ ರೆಗೂವೇಲನು ಕುಟುಂಬಗಳ ತಂದೆಯಾಗಿದ್ದನು: ನಹತ, ಜೆರಹ, ಶಮ್ಮಾ ಮತ್ತು ಮಿಜ್ಜಾ. ಕುಟುಂಬಗಳೆಲ್ಲವು ಏಸಾವನ ಹೆಂಡತಿಯಾದ ಬಾಸೆಮತಳ ಸಂತತಿಯವರು.
18 ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.
19 ಕುಟುಂಬಗಳಿಗೆಲ್ಲಾ ಏಸಾವನೇ ಮೂಲಪುರುಷ.
20 ಏಸಾವನಿಗಿಂತ ಮೊದಲು ಹೋರಿಯ ಜನಾಂಗದ ಸೇಯೀರ್ ಎಂಬವನು ಎದೋಮಿನಲ್ಲಿ ವಾಸವಾಗಿದ್ದನು. ಸೇಯೀರನ ಗಂಡುಮಕ್ಕಳು: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
21 ದೀಶೋನ್, ಏಚೆರ್ ಮತ್ತು ದೀಶಾನ್, ಗಂಡುಮಕ್ಕಳು ಕುಲಪತಿಗಳಾಗಿದ್ದರು.
22 ಲೋಟಾನನು ಹೋರಿ, ಹೇಮಾಮ್ ಎಂಬುವರ ತಂದೆ. (ತಿಮ್ನಳು ಲೋಟಾನನ ತಂಗಿ.)
23 ಶೋಬಾಲನು ಅಲ್ಪಾನ್, ಮಾನಹತ್, ಗೇಬಾಲ್, ಶೆಫೋ ಮತ್ತು ಓನಾಮ್ ಎಂಬವರ ತಂದೆ.
24 ಸಿಬೆಯೋನನಿಗೆ ಅಯ್ಯಾ ಮತ್ತು ಅನಾಹ ಎಂಬ ಇಬ್ಬರು ಗಂಡುಮಕ್ಕಳಿದ್ದರು. (ತನ್ನ ತಂದೆಯ ಕತ್ತೆಗಳನ್ನು ಮೇಯಿಸುತ್ತಿದ್ದಾಗ ಬಿಸಿನೀರಿನ ಒರತೆಗಳನ್ನು ಕಂಡುಕೊಂಡವನೇ ಅನಾಹ.)
25 ಅನಾಹನು ದೀಶೋನ್ ಮತ್ತು ಓಹೊಲೀಬಾಮಳ ತಂದೆ.
26 ದಿಶೋನನಿಗೆ ಹೆಮ್ದಾನ್, ಎಷ್ಬಾನ್, ಇತ್ರಾನ್ ಮತ್ತು ಕೆರಾನ್ ಎಂಬ ನಾಲ್ಕ ಮಂದಿ ಗಂಡುಮಕ್ಕಳಿದ್ದರು.
27 ಏಚೆರನಿಗೆ ಬಿಲ್ಹಾನ್, ಚಾವಾನ್ ಮತ್ತು ಅಕಾನ್ ಎಂಬ ಮೂರು ಮಂದಿ ಗಂಡುಮಕ್ಕಳಿದ್ದರು.
28 ದೀಶಾನನಿಗೆ ಊಚ್ ಮತ್ತು ಅರಾನ್ ಎಂಬ ಇಬ್ಬರು ಗಂಡುಮಕ್ಕಳಿದ್ದರು.
29 ಹೋರಿಯರ ಕುಟುಂಬಗಳ ನಾಯಕರುಗಳ ಹೆಸರುಗಳು ಇಂತಿವೆ: ಲೋಟಾನ್, ಶೋಬಾಲ್, ಸಿಬೆಯೋನ್, ಅನಾಹ,
30 ದೀಶೋನ್, ಏಚೆರ್ ಮತ್ತು ದೀಶಾನ್. ಸೇಯೀರ್‌ನಲ್ಲಿ ವಾಸವಾಗಿದ್ದ ಹೋರಿಯ ಕುಟುಂಬಗಳ ನಾಯಕರುಗಳು ಇವರೇ.
31 ಸಮಯದಲ್ಲಿ ಎದೋಮಿನಲ್ಲಿ ರಾಜರುಗಳಿದ್ದರು. ಇಸ್ರೇಲರಿಗಿಂತಲೂ ಮುಂಚೆ ಎದೋಮಿಗೆ ರಾಜರುಗಳಿದ್ದರು.
32 ಬೆಯೋರನ ಮಗನಾದ ಬೆಲಗನು ಎದೋಮಿನ ರಾಜನಾಗಿದ್ದನು. ಅವನು ದಿನ್ಹಾಬಾ ನಗರವನ್ನು ಆಳಿದನು.
33 ಬೆಲಗನು ಸತ್ತಮೇಲೆ, ಯೋಬಾಬನು ರಾಜನಾದನು. ಯೋಬಾಬನು ಬೊಚ್ರದವನಾದ ಚೆರಹನ ಮಗನು.
34 ಯೋಬಾಬನು ಸತ್ತಮೇಲೆ ಹುಷಾಮನು ಆಳಿದನು. ಹುಷಾಮನು ತೇಮಾನೀಯರ ದೇಶದವನು.
35 ಹುಷಾಮನು ಸತ್ತಮೇಲೆ, ಹದದನು ದೇಶವನ್ನು ಆಳಿದನು. ಹದದನು ಬೆದದನ ಮಗನು. (ಮೊವಾಬ್ಯರನ್ನು ಮಿದ್ಯಾನರ ದೇಶದಲ್ಲಿ ಸೋಲಿಸಿದವನೇ ಬೆದದನು.) ಹದದನು ಅವೀತ್ ಪಟ್ಟಣದವನು.
36 ಹದದನು ಸತ್ತಮೇಲೆ, ಸಮ್ಲಾಹನು ದೇಶವನ್ನು ಆಳಿದನು; ಸಮ್ಲಾಹನು ಮಸ್ರೇಕದವನು.
37 ಸಮ್ಲಾಹನು ಸತ್ತಮೇಲೆ ಸೌಲನು ದೇಶವನ್ನು ಆಳಿದನು. ಸೌಲನು ಯೂಫ್ರೇಟೀಸ್ ನದೀತೀರದಲ್ಲಿರುವ ರೆಹೋಬೋತೂರಿನವನು.
38 ಸೌಲನು ಸತ್ತಮೇಲೆ ದೇಶವನ್ನು ಬಾಳ್ಹಾನಾನನು ಆಳಿದನು. ಬಾಳ್ಹಾನಾನನು ಅಕ್ಬೋರನ ಮಗನು.
39 ಬಾಳ್ಹಾನಾನನು ಸತ್ತಮೇಲೆ ದೇಶವನ್ನು ಹದದನು ಆಳಿದನು. ಹದದನು ಪಾಗು ಎಂಬ ಪಟ್ಟಣದವನು. ಹದದನ ಹೆಂಡತಿಯ ಹೆಸರು ಮಹೇಟಬೇಲ್. ಮಹೇಟಬೇಲಳು ಮಟ್ರೇದ ಎಂಬಾಕೆಯ ಮಗಳು. (ಮಟ್ರೇದಳು ಮೇಜಾಹಾಬನ ಮಗಳು.)
40 This verse may not be a part of this translation
41 This verse may not be a part of this translation
42 This verse may not be a part of this translation
43 This verse may not be a part of this translation
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×