Bible Versions
Bible Books

Joshua 15 (ERVKN) Easy to Read Version - Kannadam

1 ಯೆಹೂದಕುಲಕ್ಕೆ ಕೊಟ್ಟ ಸ್ವಾಸ್ತ್ಯವನ್ನು ಕುಲದ ಗೋತ್ರಗಳಲ್ಲಿ ಹಂಚಲಾಗಿತ್ತು. ಪ್ರದೇಶವು ಎದೋಮಿನ ಗಡಿಯವರೆಗೂ ದಕ್ಷಿಣದಲ್ಲಿ ತೇಮಾನಿನ ಅಂಚಿನಲ್ಲಿರುವ ಚಿನ್ ಅರಣ್ಯದವರೆಗೂ ವಿಸ್ತರಿಸಿಕೊಂಡಿತ್ತು.
2 ಯೆಹೂದ್ಯರ ಸ್ವಾಸ್ತ್ಯವು ಲವಣಸಮುದ್ರದ ದಕ್ಷಿಣ ತೀರದಿಂದ ಆರಂಭವಾಗಿತ್ತು.
3 ಸೀಮೆಯು ದಕ್ಷಿಣದಲ್ಲಿ ಸ್ಕಾರ್ಪಿಯನ್ ಎಂಬ ಇಕ್ಕಟ್ಟಾದ ಮಾರ್ಗದಿಂದ ಮುನ್ನಡೆದು ಚಿನ್ ಮರುಭೂಮಿಯವರೆಗೆ ಹೋಗಿತ್ತು. ಅಲ್ಲಿಂದ ಅದು ದಕ್ಷಿಣದಲ್ಲಿ ಕಾದೇಶ್‌ಬರ್ನೇಯದವರೆಗೂ ಹೆಚ್ರೋನ್‌ನಿಂದ ಅದ್ದಾರವರೆಗೂ ಮುಂದುವರಿದು ಅಲ್ಲಿ ತಿರುಗಿಕೊಂಡು ಕರ್ಕದವರೆಗೆ ವಿಸ್ತರಿಸಿತ್ತು.
4 ಸೀಮೆಯು ಈಜಿಪ್ಟಿನ ಅಚ್ಮೋನಿನ ಹಳ್ಳಕ್ಕೆ ಮುಂದುವರೆದು ಮೆಡಿಟರೆನಿಯನ್ ಸಮುದ್ರದವರೆಗೆ ಹಬ್ಬಿತ್ತು. ಭೂಮಿಯೆಲ್ಲಾ ಅವರ ದಕ್ಷಿಣ ಸೀಮೆಯಲ್ಲಿತ್ತು.
5 ಅವರ ಪ್ರದೇಶದ ಪೂರ್ವದಿಕ್ಕಿನ ಸೀಮೆ ಮೃತ್ಯುಸಾಗರದ ದಂಡೆಯಿಂದ ಜೋರ್ಡನ್ ನದಿಯು ಸಮುದ್ರವನ್ನು ಸೇರುವ ಕ್ಷೇತ್ರದವರೆಗೆ ಹಬ್ಬಿತ್ತು. ಅವರ ಉತ್ತರ ಸೀಮೆಯು ಜೋರ್ಡನ್ ನದಿಯು ಲವಣ ಸಮುದ್ರವನ್ನು ಸೇರುವ ಕ್ಷೇತ್ರದಿಂದ ಆರಂಭವಾಗಿ
6 ಅಲ್ಲಿಂದ ಬೇತ್‌ಹೊಗ್ಲಾಕ್ಕೆ ಸಾಗಿ ಬೇತ್‌ಅರಬಾದ ಉತ್ತರಕ್ಕೆ ಮುಂದುವರಿದಿತ್ತು. ಅಲ್ಲಿಂದ ಅದು ರೂಬೇನನ ಮಗನಾದ ಬೋಹನನ ಬಂಡೆಯವರೆಗೆ ಸಾಗಿತ್ತು.
7 ಅಲ್ಲಿಂದ ಅದು ಆಕೋರಿನ ಕಣಿವೆಯಿಂದ ಹಾದು ದೆಬೀರಕ್ಕೆ ಮುಟ್ಟಿ ಅಲ್ಲಿ ಉತ್ತರಕ್ಕೆ ತಿರುಗಿ ಗಿಲ್ಗಾಲಕ್ಕೆ ಮುಟ್ಟಿತ್ತು. ಅದು ಮೀಮಿನ ಬೆಟ್ಟದಿಂದ ಹೋಗುವ ದಾರಿಯ ಎದುರಿಗೆ ಗಿಲ್ಗಾಲ್ ಇದೆ. ಅದು ಹಳ್ಳದ ದಕ್ಷಿಣ ಭಾಗದಲ್ಲಿದೆ. ಸೀಮೆಯು ಏನ್‌ಷೆಮೆಷ್ ನದಿಯವರೆಗೆ ಹೋಗಿ ಏನ್‌ರೋಗೆಲ್‌ನಲ್ಲಿ ಕೊನೆಗೊಳ್ಳುತ್ತದೆ.
8 ಸೀಮೆಯು ಜೆರುಸಲೇಮ್ ಎಂದು ಕರೆಯಲ್ಪಟುವ ಯೆಬೂಸಿಯ ನಗರದ ದಕ್ಷಿಣ ಮಾರ್ಗವಾಗಿ ಬೆನ್‌ಹಿನ್ನೋಮ್ ಕಣಿವೆಗೆ ಹೋಗುತ್ತದೆ. ಸ್ಧಳದಲ್ಲಿ ಸೀಮೆಯು ಹಿನ್ನೋಮ್ ಕಣಿವೆಯ ಪಶ್ಚಿಮದಿಕ್ಕಿನ ಬೆಟ್ಟದ ತುದಿಗೆ ಹೋಗುತ್ತದೆ. ಇದು ರೆಫಾಯೀಮ್ ಕಣಿವೆಯ ಉತ್ತರದ ಕೊನೆ.
9 ಅಲ್ಲಿಂದ ಸೀಮೆಯು ನೆಫ್ತೋಹ ಬುಗ್ಗೆಗೆ ಹೋಗುತ್ತದೆ; ಅಲ್ಲಿಂದ ಎಫ್ರೋನ್ ಬೆಟ್ಟದ ಸಮೀಪದ ನಗರಗಳಿಗೆ ಹೋಗುತ್ತದೆ; ಅಲ್ಲಿಂದ ತಿರುಗಿ ‘ಬಾಲಾ’ ಎಂಬ ಊರಿಗೆ ಹೋಗುತ್ತದೆ. (ಬಾಲಾವನ್ನು ಕಿರ್ಯತ್ಯಾರೀಮ್ ಎಂದೂ ಕರೆಯುತ್ತಾರೆ.)
10 ಬಾಲಾದಲ್ಲಿ ಸೀಮೆಯು ಪಶ್ಚಿಮಕ್ಕೆ ತಿರುಗಿಕೊಂಡು ಸೇಯೀರ್ ಬೆಟ್ಟಪ್ರದೇಶಕ್ಕೆ ಹೋಗುತ್ತದೆ; ಅಲ್ಲಿಂದ ಅದು ಕೆಸಾಲೋನ್ ಎಂಬ ಯಾರೀಮ್ ಬೆಟ್ಟದ ಉತ್ತರ ಮಾರ್ಗವಾಗಿ ಇಳಿಯುತ್ತಾ ಬೇತ್‌ಷೆಮೆಷಿಗೂ ಅಲ್ಲಿಂದ ತಿಮ್ನಾ ಊರಿಗೂ ಹೋಗುತ್ತದೆ.
11 ಅಲ್ಲಿಂದ ಗಡಿಯು ಉತ್ತರ ದಿಕ್ಕಿನಲ್ಲಿರುವ ಎಕ್ರೋನ್ ಗುಡ್ಡಕ್ಕೆ ಹೋಗಿ ಅಲ್ಲಿಂದ ಶಿಕ್ಕೆರೋನಿಗೆ ತಿರುಗಿಕೊಂಡು ಬಾಲಾ ಗುಡ್ಡವನ್ನು ತಲುಪುತ್ತದೆ. ಗಡಿಯು ಯಬ್ನೇಲಿನವರೆಗೆ ಮುಂದುವರೆದು ನಂತರ ಮೆಡಿಟರೆನಿಯನ್ ಸಮುದ್ರ ತೀರದಲ್ಲಿ ಮುಗಿಯುವುದು.
12 ಮೆಡಿಟರೆನಿಯನ್ ಸಮುದ್ರತೀರವೇ ಯೆಹೂದ್ಯರ ಸ್ವಾಸ್ತ್ಯದ ಪಶ್ಚಿಮ ಸೀಮೆಯಾಗಿತ್ತು. ಹೀಗೆ ಯೆಹೂದ್ಯರ ಸ್ವಾಸ್ತ್ಯವು ನಾಲ್ಕು ಸೀಮೆಯ ಒಳಗಡೆ ಇತ್ತು. ಯೆಹೂದ್ಯರ ಗೋತ್ರಗಳು ಪ್ರದೇಶದಲ್ಲಿದ್ದವು.
13 ಯೆಫುನ್ನೆಯ ಮಗನಾದ ಕಾಲೇಬನಿಗೆ ಯೆಹೂದ ಕುಲದವರ ಸ್ವಾಸ್ತ್ಯದಲ್ಲಿಯೇ ಸ್ವಲ್ಪ ಪ್ರದೇಶವನ್ನು ಕೊಡಬೇಕೆಂದು ದೇವರು ಯೆಹೋಶುವನಿಗೆ ಹೇಳಿದ್ದನು. ಅದಕ್ಕಾಗಿ ಯೆಹೋಶುವನು ಕಾಲೇಬನಿಗೆ ದೇವರು ಆಜ್ಞಾಪಿಸಿದ ಪ್ರದೇಶವನ್ನು ಕೊಟ್ಟನು. ಯೆಹೋಶುವನು ಅವನಿಗೆ ಹೆಬ್ರೋನ್ ಎಂಬ ಕಿರ್ಯಾತ್ ಅರ್ಬ ಊರನ್ನು ಕೊಟ್ಟನು. (ಅರ್ಬನು ಅನಾಕನ ತಂದೆ.)
14 ಹೆಬ್ರೋನ್‌ನಲ್ಲಿ ವಾಸವಾಗಿದ್ದ ಮೂರು ಅನಾಕ ಕುಟುಂಬಗಳನ್ನು ಕಾಲೇಬನು ಅಲ್ಲಿಂದ ಬಲವಂತವಾಗಿ ಹೊರಡಿಸಿದನು. ಕುಟುಂಬಗಳ ಹೆಸರುಗಳು ಶೇಷೈ, ಅಹೀಮನ್ ಮತ್ತು ತಲ್ಮೈ. ಅವರು ಅನಾಕನ ವಂಶಸ್ಥರಾಗಿದ್ದರು.
15 ಆಮೇಲೆ ಕಾಲೇಬನು ದೆಬೀರಿನಲ್ಲಿ ವಾಸಮಾಡುತ್ತಿದ್ದ ಜನರ ವಿರುದ್ಧ ಹೋರಾಡಿದನು. (ಹಿಂದಿನ ಕಾಲದಲ್ಲಿ ದೆಬೀರಿಗೆ ಕಿರ್ಯತ್‌ಸೇಫೇರ್ ಎಂದು ಕರೆಯುತ್ತಿದ್ದರು.)
16 ಕಾಲೇಬನು, “ನಾನು ಕಿರ್ಯತ್ ಸೇಫೇರಿನ ಮೇಲೆ ಧಾಳಿ ಮಾಡಲಿಚ್ಛಿಸುತ್ತೇನೆ. ನಗರದ ಮೇಲೆ ಧಾಳಿಮಾಡಿ ಅದನ್ನು ಗೆದ್ದುಕೊಟ್ಟವರಿಗೆ ನನ್ನ ಮಗಳಾದ ಅಕ್ಷಾಳನ್ನು ಮದುವೆಮಾಡಿ ಕೊಡುತ್ತೇನೆ” ಎಂದು ಸಾರಿದನು.
17 ಕೆನಜನ ಮಗನಾದ ಒತ್ನೀಯೇಲನು ಪಟ್ಟಣವನ್ನು ಗೆದ್ದನು. ಕಾಲೇಬನು ತನ್ನ ಮಗಳಾದ ಅಕ್ಷಾಳನ್ನು ಒತ್ನೀಯೇಲನಿಗೆ ಮದುವೆ ಮಾಡಿಕೊಟ್ಟನು.
18 ಒತ್ನೀಯೇಲನ ಮನೆಗೆ ಅಕ್ಷಾ ಹೋದಳು. ಕಾಲೇಬನಿಂದ ಇನ್ನಷ್ಟು ಭೂಮಿಯನ್ನು ಕೇಳಲು ಅಕ್ಷಾಳನ್ನು ಒತ್ನೀಯೇಲನು ಪ್ರೇರೇಪಿಸಿದನು. ಅಕ್ಷಾಳು ತನ್ನ ತಂದೆಯ ಬಳಿಗೆ ಬಂದು ಕತ್ತೆಯ ಮೇಲಿಂದ ಇಳಿದಾಗ, “ನಿನಗೆ ಏನುಬೇಕು?” ಎಂದು ಕಾಲೇಬನು ಕೇಳಿದನು.
19 ಅದಕ್ಕೆ ಅವಳು “ನನ್ನನ್ನು ಆಶೀರ್ವದಿಸು. ನೀನು ನನಗೆ ನೆಗೆವ್‌ನಲ್ಲಿ ಮರುಭೂಮಿಯನ್ನು ಕೊಟ್ಟಿರುವೆ. ದಯವಿಟ್ಟು ನೀರಿರುವ ಭೂಮಿಯನ್ನು ಸ್ವಲ್ಪಕೊಡು” ಎಂದು ಕೇಳಿಕೊಂಡಳು. ಅವಳ ಕೋರಿಕೆಗನುಸಾರವಾಗಿ ಕಾಲೇಬನು ಮೇಲಿನ ಮತ್ತು ಕೆಳಗಿನ ನೀರಿನ ಬುಗ್ಗೆಗಳನ್ನು ಕೊಟ್ಟನು.
20 ದೇವರು ವಾಗ್ದಾನ ಮಾಡಿದ ಭೂಮಿಯನ್ನು ಯೆಹೂದ ಕುಲವು ಪಡೆದುಕೊಂಡಿತು. ಪ್ರತಿಯೊಂದು ಗೋತ್ರವು ಭೂಮಿಯ ಸ್ವಲ್ಪ ಭಾಗವನ್ನು ಪಡೆಯಿತು.
21 ಯೆಹೂದ ಕುಲವು ನೆಗೆವ್ ದಕ್ಷಿಣಭಾಗದಲ್ಲಿದ್ದ ಎಲ್ಲ ಊರುಗಳನ್ನು ಪಡೆಯಿತು. ಊರುಗಳು ಎದೋಮಿನ ಸೀಮೆಯ ಹತ್ತಿರ ಇದ್ದವು. ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಕಬ್ಜೇಲ್, ಏದೆರ್, ಯಾಗೂರ್,
22 ಕೀನಾ, ದೀಮೋನಾ, ಆದಾದಾ,
23 ಕೆದೆಷ್, ಹಾಚೋರ್, ಇತ್ನಾನ್,
24 ಜೀಫ್, ಟೆಲೆಮ್, ಬೆಯಾಲೋತ್,
25 ಹಾಚೋರ್‌ಹದತ್ತಾ, ಹಾಚೋರ್ ಎಂಬುವ ಕಿರ್ಯೋತ್‌ಹೆಚ್ರೋನ್,
26 ಅಮಾಮ್, ಶೆಮ, ಮೋಲಾದಾ,
27 ಹಚರ್‌ಗದ್ದಾ, ಹೆಷ್ಮೋನ್, ಬೇತ್ಪೆಲೆಟ್,
28 This verse may not be a part of this translation
29 This verse may not be a part of this translation
30 ಎಲ್ಟೋಲದ್, ಕೆಸೀಲ್, ಹೊರ್ಮಾ,
31 ಚಿಕ್ಲಗ್, ಮದ್ಮನ್ನಾ, ಸನ್ಸನ್ನಾ,
32 ಲೆಬಾವೋತ್, ಶಿಲ್ಹೀಮ್, ಆಯಿನ್ ಮತ್ತು ರಿಮ್ಮೋನ್. ಒಟ್ಟಿಗೆ ಇಪ್ಪತ್ತೊಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
33 ಯೆಹೂದ ಕುಲದವರು ಪಶ್ಚಿಮದಿಕ್ಕಿನ ಇಳಕಲಿನ ಪ್ರದೇಶದಲ್ಲಿಯೂ ಕೆಲವು ಊರುಗಳನ್ನು ಪಡೆದಿದ್ದರು. ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಎಷ್ಟಾವೋಲ್, ಚೊರ್ಗಾ, ಅಶ್ನಾ,
34 ಜನೋಹ, ಏಂಗನ್ನೀಮ್, ತಪ್ಪೂಹ, ಏನಾಮ್,
35 ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,
36 ಶಾರಯೀಮ್, ಅದೀತಯಿಮ್, ಗೆದೇರಾ ಮತ್ತು ಗೆದೆರೋತಯಿಮ್. ಒಟ್ಟಿನಲ್ಲಿ ಹದಿನಾಲ್ಕು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
37 ಯೆಹೂದ ಕುಲದವರಿಗೆ ಊರುಗಳನ್ನು ಸಹ ಕೊಡಲಾಯಿತು: ಚೆನಾನ್, ಹದಾಷಾ, ಮಿಗ್ದಲ್ಗಾದ್,
38 ದಿಲಾನ್, ಮಿಚ್ಪೆ, ಯೊಕ್ತೇಲ್,
39 ಲಾಕೀಷ್, ಬೊಚ್ಕತ್, ಎಗ್ಲೋನ್,
40 ಕಬ್ಬೋನ್, ಲಹ್ಮಾಸ್, ಕಿತ್ಲೀಷ್,
41 ಗೆದೇರೋತ್, ಬೇತ್‌ದಾಗೋನ್, ನಾಮಾ ಮತ್ತು ಮಕ್ಕೆದಾ. ಒಟ್ಟಿನಲ್ಲಿ ಹದಿನಾರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
42 ಯೆಹೂದದ ಜನರು ಊರುಗಳನ್ನು ಸಹ ಪಡೆದುಕೊಂಡರು: ಲಿಬ್ನಾ, ಎತೆರ್, ಆಷಾನ್,
43 ಇಫ್ತಾಹ, ಅಶ್ನಾ, ನೆಚೀಬ್,
44 ಕೆಯೀಲಾ, ಅಕ್ಜೀಬ್, ಮಾರೇಷಾ ಎಂಬ ಒಂಭತ್ತು ಪಟ್ಟಣಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
45 ಯೆಹೂದದ ಜನರು ಎಕ್ರೋನ್ ಪಟ್ಟಣವನ್ನು ಮತ್ತು ಅದರ ಸಮೀಪದಲ್ಲಿದ್ದ ಎಲ್ಲ ಸಣ್ಣ ಊರುಗಳನ್ನು ಮತ್ತು ಹೊಲಗದ್ದೆಗಳನ್ನು ಪಡೆದುಕೊಂಡರು.
46 ಎಕ್ರೋನಿನ ಪಶ್ಚಿಮದಲ್ಲಿದ್ದ ಪ್ರದೇಶ ಮತ್ತು ಅಷ್ಡೋದಿನ ಹತ್ತಿರದ ಎಲ್ಲಾ ಊರುಗಳನ್ನು ಮತ್ತು ಹೊಲಗದ್ದೆಗಳನ್ನು ಸಹ ಅವರು ಪಡೆದುಕೊಂಡರು.
47 ಅಷ್ಡೋದಿನ ಸುತ್ತಮುತ್ತಲಿನ ಎಲ್ಲ ಕ್ಷೇತ್ರ ಮತ್ತು ಅಲ್ಲಿಯ ಸಣ್ಣ ಊರುಗಳು ಯೆಹೂದ ಪ್ರದೇಶದ ಭಾಗವಾಗಿದ್ದವು. ಯೆಹೂದದ ಜನರು ಗಾಜಾದ ಸುತ್ತಮುತ್ತಲಿನ ಕ್ಷೇತ್ರ ಮತ್ತು ಹತ್ತಿರದ ಊರುಕೇರಿಗಳನ್ನೂ ಹೊಲಗದ್ದೆಗಳನ್ನೂ ಪಡೆದುಕೊಂಡರು. ಅವರ ನೆಲವು ಈಜಿಪ್ಟಿನ ನದಿಯವರೆಗೂ ವಿಸ್ತರಿಸಿತ್ತು; ಮೆಡಿಟರೆನಿಯನ್ ಸಮುದ್ರದ ತೀರದುದ್ದಕ್ಕೂ ಚಾಚಿತ್ತು.
48 ಯೆಹೂದದ ಜನರಿಗೆ ಬೆಟ್ಟಪ್ರದೇಶದಲ್ಲಿಯೂ ಊರುಗಳನ್ನು ಕೊಡಲಾಗಿತ್ತು. ಊರುಗಳ ಪಟ್ಟಿ ಇಂತಿದೆ: ಶಾಮೀರ್, ಯತ್ತೀರ್, ಸೋಕೋ,
49 ದನ್ನಾ, ದೆಬೀರ್ ಎಂಬ ಕಿರ್ಯತ್‌ಸನ್ನಾ,
50 ಅನಾಬ್, ಎಷ್ಟೆಮೋ, ಅನೀಮ್,
51 ಗೋಷೆನ್, ಹೋಲೋನ್ ಮತ್ತು ಗಿಲೋ ಎಂಬ ಹನ್ನೊಂದು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
52 ಯೆಹೂದದ ಜನರಿಗೆ ಊರುಗಳನ್ನು ಸಹ ಕೊಡಲಾಯಿತು: ಅರಬ್, ದೂಮಾ, ಎಷಾನ್,
53 ಯಾನೂಮ್, ಬೇತ್‌ತಪ್ಪೂಹ, ಅಫೇಕಾ,
54 ಹುಮ್ಟಾ ಹೆಬ್ರೋನ್ ಎಂಬ ಕಿರ್ಯತ್‌ಅರ್ಬ ಮತ್ತು ಚೀಯೋರ್ ಎಂಬ ಒಂಭತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
55 ಯೆಹೂದದ ಜನರಿಗೆ ಊರುಗಳನ್ನೂ ಕೊಡಲಾಯಿತು: ಮಾವೋನ್, ಕರ್ಮೆಲ್, ಜೀಫ್, ಯುಟ್ಟಾ,
56 ಇಜ್ರೇಲ್, ಯೆಗ್ದೆಯಾಮ್, ಜನೋಹ,
57 ಕಯಿನ್, ಗಿಬೆಯಾ ಮತ್ತು ತಿಮ್ನಾ ಎಂಬ ಹತ್ತು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
58 ಯೆಹೂದದ ಜನರಿಗೆ ಊರುಗಳನ್ನೂ ಕೊಡಲಾಯಿತು: ಹಲ್ಹೂಲ್, ಬೇತ್‌ಚೂರ್, ಗೆದೋರ್,
59 ಮಾರಾತ್, ಬೇತನೋತ್, ಎಲ್ಟೆಕೋನ್ ಎಂಬ ಆರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
60 ಯೆಹೂದದ ಜನರಿಗೆ ರಬ್ಬಾ ಮತ್ತು ಕಿರ್ಯತ್ಯಾರೀಮ್ ಎಂದು ಕರೆಯಲ್ಪಡುವ ಕಿರ್ಯತ್‌ಬಾಳ್ ಎಂಬ ಎರಡು ಊರುಗಳನ್ನು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳನ್ನು ಸಹ ಕೊಡಲಾಯಿತು.
61 ಯೆಹೂದದ ಜನರಿಗೆ ಮರುಭೂಮಿಯಲ್ಲಿಯೂ ಕೆಲವು ಊರುಗಳನ್ನು ಕೊಡಲಾಯಿತು. ಊರುಗಳ ಪಟ್ಟಿಯನ್ನು ಇಲ್ಲಿ ಕೊಡಲಾಗಿದೆ: ಬೇತ್‌ಅರಾಬಾ, ಮಿದ್ದೀನ್, ಸೆಕಾಕಾ,
62 ನಿಬ್ಷಾನ್, ಉಪ್ಪಿನಪಟ್ಟಣ, ಮತ್ತು ಏಂಗೆದೀ ಎಂಬ ಆರು ಊರುಗಳು ಮತ್ತು ಅವುಗಳ ಸುತ್ತಮುತ್ತಲಿನ ಹೊಲಗದ್ದೆಗಳು.
63 ಜೆರುಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಹಾಕಲು ಯೆಹೂದ ಕುಲದವರಿಗೆ ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಇಂದಿನವರೆಗೂ ಜೆರುಸಲೇಮಿನಲ್ಲಿ ಯೆಹೂದ ಕುಲದವರೊಡನೆ ವಾಸವಾಗಿದ್ದಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us
×

Alert

×